×
Ad

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಪ್ರಗತಿ ವೀಕ್ಷಿಸಿದ ಉಡುಪಿ ಜಿಲ್ಲಾಧಿಕಾರಿ

Update: 2025-01-18 19:54 IST

ಉಡುಪಿ, ಜ.18: ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿ ಉಡುಪಿ ನಗರ ಹಾಗೂ ಮಣಿಪಾಲ ರಸ್ತೆಯ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿ ನಡೆಯುವ ಸ್ಥಳಕ್ಕೆ ಇಂದು ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ರೈಲ್ವೇ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ನಿರ್ಮಾಣದ ವೆಲ್ಡಿಂಗ್ ಕಾಮಗಾರಿಯ ವೇಗವು ನಿರೀಕ್ಷಿತ ಮಟ್ಟದಲ್ಲಿ ಆಗದೇ ಇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಕೆಲಸದ ವೇಗವನ್ನು ಮತ್ತಷ್ಟು ಹೆಚ್ಚಿಸಲು ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಬೇಕು ಎಂದು ಅವರು ಗುತ್ತಿಗೆದಾರರಿಗೆ ಸೂಚನೆಗಳನ್ನು ನೀಡಿದರು.

ಕಬ್ಬಿಣದ ಗರ್ಡರ್ಸ್‌ ನಿರ್ಮಾಣದ ಕಾಮಗಾರಿಯು ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಅದನ್ನು ರೈಲ್ವೇ ಹಳಿಗಳ ಮೇಲ್ಭಾಗ ದಲ್ಲಿ ಸೇತುವೆಯಾಗಿ ನಿರ್ಮಿಸಲು ಅಗತ್ಯವಿರುವ ಸಿವಿಲ್ ಕಾಮಗಾರಿಗಳನ್ನು ಸಹ ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಕೊಂಕಣ ರೈಲ್ವೆಯ ಸೀನೀಯರ್ ಇಂಜಿನಿಯರ್ ಗೋಪಾಲ ಕೃಷ್ಣ, ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ಪ್ರತಿನಿಧಿಗಳು ಉಪಸ್ಥಿತರಿದ್ದರು.



Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News