ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ
Update: 2025-01-19 19:09 IST
ಉಡುಪಿ, ಜ.19: ಕೃಷಿ ಇಲಾಖೆಯಿಂದ ಅನುಷ್ಟಾನಗೊಳ್ಳುತ್ತಿರುವ ಆಹಾರ ಮತ್ತು ಪೌಷ್ಠಿಕ ಭದ್ರತೆ (ಎಫ್‌ಎನ್‌ಎಸ್) ಯೋಜನೆಯಡಿ ತಾಂತ್ರಿಕ ಸಹಾಯಕರ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಬಿಎಸ್‌ಸಿ (ಕೃಷಿ) ಪದವೀಧರರಾಗಿರುವ, ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರುವ ಹಾಗೂ ಕೃಷಿ ಸಂಶೋಧನೆ ಮತ್ತು ಕೃಷಿ ವಿಸ್ತರಣಾ ಕಾರ್ಯಕ್ರಮದಲ್ಲಿ ಅನುಭವವಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ: ಸಿ-304, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.