×
Ad

ಸುಗಮ ಸಂಚಾರಕ್ಕೆ ಪೂರಕ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ನಗರಸಭೆ ಬದ್ಧ: ಪ್ರಭಾಕರ ಪೂಜಾರಿ

Update: 2025-01-22 19:03 IST

ಉಡುಪಿ, ಜ.22: ನಗರದಲ್ಲಿ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಸುಗಮ ಸಂಚಾರಕ್ಕೆ ಪೂರಕವಾಗಿ ನಗರದ ಪ್ರಮುಖ ಭಾಗಗಳಲ್ಲಿ ಪೊಲೀಸ್ ಇಲಾಖೆಯ ಮಾರ್ಗಸೂಚಿಯಂತೆ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ನಗರಸಭೆ ಈಗಾಗಲೇ ಕ್ರಮ ಕೈಗೊಂಡಿದ್ದು, ಶೀಘ್ರದಲ್ಲೇ ವೈಜ್ಞಾನಿಕ ರೀತಿಯಲ್ಲಿ ಸಿಗ್ನಲ್ ಅಳವಡಿಕೆಗೆ ನಗರಸಭೆ ಬದ್ಧವಾಗಿದೆ ಎಂದು ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ತಿಳಿಸಿದ್ದಾರೆ.

ಉಡುಪಿ ನಗರದ ಕಲ್ಸಂಕ ಜಂಕ್ಷನ್‌ನಲ್ಲಿ ಬ್ಯಾರಿಕೇಡ್ ಅಳವಡಿಸಿದರಿಂದ ಸ್ಥಳೀಯರಿಗೆ ಉಂಟಾಗಿರುವ ಸಮಸ್ಯೆ ಬಗ್ಗೆ ಈಗಾಗಲೇ ಶಾಸಕ ಯಶ್‌ಪಾಲ್ ಸುವರ್ಣ ನೇತೃತ್ವದಲ್ಲಿ ಸ್ಥಳೀಯ ಮುಖಂಡರೊಂದಿಗೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಬ್ಯಾರಿಕೇಡ್ ತೆರವಿಗೆ ಮನವಿ ಮಾಡಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೂ ಮಾಹಿತಿ ನೀಡಿದ್ದೇವೆ ಎಂದರು.

ಈಗಾಗಲೇ ತೀರ ಅವೈಜ್ಞಾನಿಕ ರೀತಿಯಲ್ಲಿ ಟ್ರಾಫಿಕ್ ಸಿಗ್ನಲ್ ಕಂಬಗಳನ್ನು ರಸ್ತೆಯ ಬದಿಯಲ್ಲಿ ಹಾಕಿ ಪಾದಚಾರಿಗಳಿಗೆ, ವಾಹನ ಸಂಚಾರಕ್ಕೆ ಸಮಸ್ಯೆ ಎದುರಾಗುತ್ತಿದ್ದು, ಕೇವಲ ಜಾಹೀರಾತಿಗಾಗಿ ಟ್ರಾಫಿಕ್ ಸಿಗ್ನಲ್ ಮಾಡಿ ದಂತಿದೆ. ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ಬೃಹತ್ ಗಾತ್ರದ ಟ್ರಾಫಿಕ್ ಕಂಬಗಳನ್ನು ಅಳವಡಿಸಿರುವ ಹಿನ್ನೆಲೆ ತ್ರಿವೇಣಿ ಸರ್ಕಲ್, ಡಯಾನ ಸರ್ಕಲ್ ಸಹಿತ ವಿವಿಧೆಡೆ ವಾಹನ ಸಂಚಾರಕ್ಕೆ ಕೃತಕ ತಡೆ ಸೃಷ್ಟಿಸಿದಂತಾಗಿದೆ. ಈ ಕಂಬಗಳನ್ನು ತೆರವು ಮಾಡುವ ಬಗ್ಗೆಯೂ ನಗರಸಭೆ ವತಿಯಿಂದ ಕ್ರಮ ವಹಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News