×
Ad

ಗಂಗೊಳ್ಳಿ: ಏಳೇ ಗಂಟೆಯೊಳಗೆ ಮನೆ ಕಳವು ಪ್ರಕರಣದ ಆರೋಪಿ ದಂಪತಿ ಬಂಧನ

Update: 2025-01-22 21:47 IST

ವಿನಾಯಕ - ಪ್ರಮೀಳಾ

ಗಂಗೊಳ್ಳಿ, ಜ.22: ಮನೆ ಕಳ್ಳತನ ನಡೆದ ಕೇವಲ ಏಳೇ ಗಂಟೆಯೊಳಗೆ ಆರೋಪಿ ದಂಪತಿಯನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಗುಜ್ಜಾಡಿ ನಿವಾಸಿ ವಿನಾಯಕ (41) ಹಾಗೂ ಆತನ ಪತ್ನಿ ಪ್ರಮೀಳಾ(30) ಬಂಧಿತ ಆರೋಪಿಗಳು. ಜ.21ರಂದು ಬೆಳಗ್ಗೆ ತ್ರಾಸಿ ಬೀಚ್ ಬಳಿ ಮನೆಯೊಂದರ ಮೇಜಿನ ಮೇಲೆ ಇಟ್ಟಿದ್ದ ಬ್ಯಾಗ್‌ನ ಜೀಪ್ ತೆಗೆದು ಬ್ಯಾಗ್‌ನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್, 16 ಗ್ರಾಂ ತೂಕದ ಬಳೆ ಹಾಗೂ 3 ಗ್ರಾಂ ತೂಕದ 3 ಚಿನ್ನದ ಉಂಗುರ ಸಹಿತ 2 ಲಕ್ಷದ ಆಭರಣ ಕಳವಾಗಿದ್ದು ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ ಗಂಗೊಳ್ಳಿ ಎಸ್ಸೈ ಹರೀಶ್ ಆರ್. ಹಾಗೂ ಸಿಬ್ಬಂದಿ ಶಾಂತರಾಮ, ರಾಜು, ನಾಗರಾಜ, ರಾಘವೇಂದ್ರ, ಸಂದೀಪ ಕುರಣಿ, ಮಾರುತಿ ನಾಯ್ಕ, ದಿನೇಶ್ ಅವರ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮನೆ ಕಳ್ಳತನದ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಜ.21ರಂದು ರಾತ್ರಿ 8 ಗಂಟೆ ಸುಮಾರಿಗೆ ಆರೋಪಿಗಳನ್ನು ಬಂಧಿಸಿದರು. ಬಂಧಿತರಿಂದ 2 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟಿಯನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸ ಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News