×
Ad

ಮತದಾನದ ಹಕ್ಕು ಚಲಾಯಿಸಿ ಸದೃಢ ರಾಷ್ಟ್ರ ಕಟ್ಟಿ: ನ್ಯಾ.ಅಬ್ದುಲ್ ರಹೀಮ್

Update: 2025-01-25 19:33 IST

ಕುಂದಾಪುರ, ಜ.25: ನಮ್ಮದು ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಇದರ ತಳಹದಿ ಗಟ್ಟಿಯಾಗಿರಬೇಕಿದ್ದರೆ ಚುನಾವಣಾ ಆಯೋಗ ಸದೃಢವಾಗಿರಬೇಕು ಮತ್ತು ಅತ್ಯಂತ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಬೇಕಾಗಿದೆ. ಮತದಾನ ಮತದಾರರ ಸಂವಿಧಾನ ಬದ್ಧ ಹಕ್ಕು ಆಗಿದ್ದು, ಮತದಾರರಿಗೆ ಅವರ ಅಧಿಕಾರದ ಬಗ್ಗೆ ಮಾಹಿತಿ ನೀಡಬೇಕಾಗಿದೆ ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಮ್ ಹುಸೇನ್ ಶೇಖ್ ಹೇಳಿದ್ದಾರೆ.

ಕುಂದಾಪುರ ತಾಲೂಕು ಆಡಳಿತ, ತಾಲೂಕು ಪಂಚಾಯತ್, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅಭಿಯೋಗ ಇಲಾಖೆಗಳ ಸಹಯೋಗದೊಂದಿಗೆ ಕುಂದಾಪುರದ ತಾಪಂ ಸಭಾಂಗಣದಲ್ಲಿ ಶನಿವಾರ ಆಯೋಜಿಸ ಲಾದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ನಮ್ಮ ದೇಶದಲ್ಲಿ 100 ಕೋಟಿ ಮತದಾರರನ್ನು ನಿಭಾಯಿಸುವ ಜವಾಬ್ದಾರಿ ಯನ್ನು ಚುನಾವಣಾ ಆಯೋಗ ಮೇಲಿದ್ದು, ಚುನವಾಣಾ ಆಯೋಗ ಈ ಕಾರ್ಯವನ್ನು ಈವರೆಗೆ ಯಶಸ್ವಿಯಾಗಿ ನಿರ್ವಹಿಸಿಕೊಂಡು ಬಂದಿದೆ. ಮತಪತ್ರದ ಬದಲಿಗೆ ಇವಿಎಂ ಯಂತ್ರಗಳನ್ನು ಅಳವಡಿಸಿದಾಗ ಚುನಾವಣಾ ಆಯೋಗಕ್ಕೆ ಬಹಳಷ್ಟು ಸವಾಲುಗಳು ಎದುರಾಗಿತ್ತು. ಆದರೆ ಮತದಾರರಿಗೆ ಸರಿಯಾದ ಮಾಹಿತಿಯನ್ನು ನೀಡುವ ಮೂಲಕ ಎಲ್ಲಾ ಚುನಾವಣೆಯನ್ನು ಚುನಾವಣಾ ಆಯೋಗ ಯಶಸ್ವಿ ಯಾಗಿ ನಡೆಸಿದೆ. ಮತದಾರರ ತಮ್ಮ ಸಂವಿಧಾನಬದ್ಧ ಮತದಾನದ ಹಕ್ಕನ್ನು ಚಲಾಯಿಸಿ ಸದೃಢ ರಾಷ್ಟ್ರ ಕಟ್ಟಲು ಕೈಜೋಡಿಸಬೇಕು ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಕೆ.ಮಹೇಶ್ಚಂದ್ರ ವಹಿಸಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ರಾಜು ಎನ್., ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಮಂಜುಳ ಬಿ. ಮಾತನಾಡಿದರು.

ಕುಂದಾಪುರ ತಾಪಂ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಡಾ.ರವಿ ಕುಮಾರ್ ಹುಕ್ಕೇರಿ, ಕುಂದಾಪುರ ಪೊಲೀಸ್ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ.ಕುಲಕರ್ಣಿ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಆನಂದ ಜೆ., ಸಹಾಯಕ ಸರಕಾರಿ ಅಭಿಯೋಜಕ ಉದಯ ಕುಮಾರ್ ಬಿ.ಎ., ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಹಂದಟ್ಟು ಪ್ರಮೋದ ಹಂದೆ, ಪ್ರಧಾನ ಕಾರ್ಯದರ್ಶಿ ಗಿಳಿಯಾರು ಪ್ರಕಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಕುಂದಾಪುರ ತಾಲೂಕು ತಹಶೀಲ್ದಾರ್ ಮಲ್ಲಿಕಾರ್ಜುನ್ ಸ್ವಾಗತಿಸಿದರು. ಆಶಾಲತಾ ಪ್ರಾರ್ಥಿಸಿದರು. ಉಪತಹಶೀಲ್ದಾರ್ ವಿನಯ್ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News