ಬಂಟ್ವಾಡಿ ಶಾಲಾ ಅಮೃತ ಮಹೋತ್ಸವ: ಶಿಕ್ಷಕರಿಗೆ ಸನ್ಮಾನ
ಕುಂದಾಪುರ, ಜ.25: ಸೇನಾಪುರ ಗ್ರಾಮದ ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಸಮಾರಂಭದ ಶನಿವಾರ ಜರಗಿತು.
ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕ, ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಬಿ.ಅರುಣ್ ಕುಮಾರ್ ಶೆಟ್ಟಿ ವಹಿಸಿ ದ್ದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಶ್ರೀಕಾಂತ ಶ್ಯಾನುಭಾಗ್, ಸಿಆರ್‌ಪಿ ಸತೀಶ್ ಶೆಟ್ಟಿ, ಉದ್ಯಮಿಗಳಾದ ಅಜಿತ್ ಪ್ರಸಾದ್ ಶೆಟ್ಟಿ ಬೆಂಗಳೂರು, ಚಿತ್ತರಂಜನ್ ಹೆಗ್ಡೆ ಹರ್ಕೂರು, ಶಿಕ್ಷಕ-ರಕ್ಷಕ ಸಮಿತಿ ಅಧ್ಯಕ್ಷೆ ಜಯಲಕ್ಷ್ಮಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನರಸಿಂಹ ಮೊಗವೀರ ಬಂಟ್ವಾಡಿ ಮೊದಲಾದವರು ಉಪಸ್ಥಿತರಿದ್ದರು.
ಇದೇ ಸಂದರ್ಭ ಗುರುವಂದನಾ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸ ಲಾಯಿತು. ಶಾಲೆಯಲ್ಲಿ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಲಾಯಿತು. ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡುತ್ತಿರುವ ಐರಬೈಲು ಆನಂದ ಶೆಟ್ಟಿ ಮತ್ತು ಹೆಮ್ಮಾಡಿ ಪ್ರಭಾಕರ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ನಮ್ಮ ಶಾಲೆ ನಮ್ಮ ಹೆಮ್ಮೆ ಅಭಿಯಾನದಲ್ಲಿ ಕೈಜೋಡಿಸಿದ ವಿದ್ಯಾಭಿಮಾನಿಗಳನ್ನು ಗೌರವಿಸಲಾಯಿತು.
ಶಾಲೆಯ ಪ್ರಾಕ್ತನ ವಿದ್ಯಾರ್ಥಿ ಆದರ್ಶ ದೇವಾಡಿಗ ಸ್ವಸ್ತಿ ವಾಚನಗೈದರು. ಉಪಪ್ರಾಂಶುಪಾಲ ಚಂದ್ರಶೇಖರ ಶೆಟ್ಟಿ ಸ್ವಾಗತಿ ಸಿದರು. ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ ಆಚಾರ್ಯ ವರದಿ ವಾಚಿಸಿದರು. ಶಂಭು ಗುಡ್ಡಮ್ಮಾಡಿ ಸನ್ಮಾನಿತರನ್ನು ಪರಿಚಯಿ ಸಿದರು. ನಿವೃತ್ತ ಮುಖ್ಯೋಪಾಧ್ಯಾಯ ನಾಗೇಶ ಶ್ಯಾನುಭಾಗ್ ಕಾರ್ಯಕ್ರಮ ನಿರ್ವಹಿಸಿದರು.