×
Ad

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

Update: 2025-01-27 21:25 IST

ಉಡುಪಿ: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವ ತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳ ಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯ ದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಯಂದು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆಬ್ರವರಿ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ-204, 1ನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574978ನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News