×
Ad

ಒಳಕಾಡು ಶಾಲೆ ಜೇನು ದಾಳಿ: ಆಸ್ಪತ್ರೆಗೆ ಶಾಸಕ ಭೇಟಿ

Update: 2025-01-29 21:32 IST

ಉಡುಪಿ, ಜ.29: ಒಳಕಾಡು ಶಾಲೆಯಲ್ಲಿ ಜೇನು ಕಡಿತದಿಂದ ಅಸ್ವಸ್ಥರಾಗಿ ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಬುಧವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ವಿದ್ಯಾರ್ಥಿಗಳು ಚೇತರಿಸಿಗೊಳ್ಳುತಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಾಗಿ ವೈದ್ಯರು ಶಾಸಕರಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ನಗರಸಭಾ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಶಾಲಾಭಿವೃದ್ಧಿ ಸಮಿತಿಯ ನಾಗ ಭೂಷಣ್ ಶೇಟ್, ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News