×
Ad

ಮಕ್ಕಳಿಗೆ ಸಂಬಂಧಿತ ಕಾಯ್ದೆಗಳ ಕುರಿತು ತರಬೇತಿ ಕಾರ್ಯಾಗಾರ

Update: 2025-01-30 20:47 IST

ಉಡುಪಿ, ಜ.30:ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಶಿಕ್ಷಣ), ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಮಕ್ಕಳಿಗೆ ಸಂಬಂಧಿತ ಕಾಯ್ದೆಗಳ ಕುರಿತಂತೆ ಒಂದು ದಿನದ ತರಬೇತಿ ಕಾರ್ಯಾಗಾರ ಬುಧವಾರ ಮಣಿಪಾಲ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶ್ರೀನಿವಾಸ್ ರಾವ್ ಉದ್ಘಾಟಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ.ಆರ್. ಅಧ್ಯಕ್ಷತೆ ವಹಿಸಿದ್ದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಇತರರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕೊಪ್ಪಳದ ಮಕ್ಕಳ ರಕ್ಷಣಾ ಯೋಜನೆಯ ಯೂನಿಸೆಫ್ ಪ್ರಾದೇಶಿಕ ಸಂಯೋಜಕ ಡಾ. ಕೊಣಿಲ್ ರಾಘವೇಂದ್ರ ಭಟ್ ಆಗಮಿಸಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಸ್ವಾಗತಿಸಿ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಜ್ಯೋತಿ ವಂದಿಸಿದರು.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News