ಕೌಟುಂಬಿಕ ಕಲಹ: ರೈಲಿಗೆ ತಲೆಗೊಟ್ಟು ಪತಿ ಆತ್ಮಹತ್ಯೆ
ಬೈಂದೂರು, ಫೆ.3: ಕೌಟುಂಬಿಕ ಕಲಹದಿಂದ ಬೇಸತ್ತ ಪತಿ ಚಲಿಸುತ್ತಿದ್ದ ರೈಲಿನಡಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.3ರಂದು ಬೆಳಗ್ಗೆ ಅರೆಹೊಳೆ ಬೈಪಾಸ್‌ನ ರೈಲ್ವೆ ಸೇತುವೆ ಬಳಿ ನಡೆದಿದೆ.
ಮೃತರನ್ನು ಹಕ್ಲಾಡಿ ಗ್ರಾಮದ ವಿಘ್ನೇಶ್ವರ (30) ಎಂದು ಗುರುತಿಸಲಾಗಿದೆ. ಕುಂದಾಪುರ ಪಾರಿಜಾತ ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಇವರು, ಮದ್ಯ ಸೇವನೆಯ ಚಟ ಹೊಂದಿದ್ದರು. ಮೂರು ವರ್ಷಗಳ ಹಿಂದೆ ಚಿತ್ತಾಡಿ ಹೇರೂರಿನ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು.
ಗಂಡ ಹೆಂಡತಿ ಮಧ್ಯೆ ಸಣ್ಣಪುಟ್ಟ ವಿಚಾರಕ್ಕೆ ಪ್ರತಿದಿನ ಗಲಾಟೆ ನಡೆಯುತ್ತಿದ್ದು, ಫೆ.2ರಂದು ಚಿತ್ತಾಡಿ ಹೇರೂರಿನಲ್ಲಿ ಪತ್ನಿ ಜೊತೆ ಗಲಾಟೆ ಮಾಡಿಕೊಂಡು ಹೋಗಿದ್ದ ವಿಘ್ನೇಶ್ವರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.