ಮಹಿಳೆ ನಾಪತ್ತೆ
Update: 2025-02-03 21:22 IST
ಉಡುಪಿ, ಫೆ.3: ಮೂಲತಃ ದಾವಣಗೆರೆ ಜಿಲ್ಲೆ ಹರಿಹರದವರಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ನ್ಯೂ ಕಾಲೋನಿ ಎಂಬಲ್ಲಿ ವಾಸದ್ದ ಅಂಜುಬಾನು (28) ಎಂಬ ಮಹಿಳೆಯು 2024ರ ಆಗಸ್ಟ್ 23 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 3 ಇಂಚು ಎತ್ತರ, ಉದ್ದ ಮುಖ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿ ಯನ್ನು ಸಂಪರ್ಕಿಸಬಹುದು ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.