×
Ad

ಮಲ್ಪೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಡಿಸಿಗೆ ಮನವಿ

Update: 2025-02-07 19:14 IST

ಉಡುಪಿ, ಫೆ.7: ಉಡುಪಿ-ಮಲ್ಪೆರಾಷ್ಟ್ರೀಯ ಹೆದ್ದಾರಿಯನ್ನು ಕೂಡಲೇ ದುರಸ್ತಿಗೊಳಿಸುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರಿಗೆ ಶುಕ್ರವಾರ ಮನವಿ ಮಾಡಲಾಯಿತು.

ಉಡುಪಿ -ಮಲ್ಪೆರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದೆಗೆಟ್ಟಿರುವುದರಿಂದ ವಾಹನ ಸಂಚಾರಕ್ಕೆ ಬಹಳಷ್ಟು ತೊಂದರೆಯಾ ಗುತ್ತಿದ್ದು ಮಲ್ಪೆ ಮತ್ತು ಮಲ್ಪೆಯ ಆಸುಪಾಸಿನ ಪ್ರದೇಶಗಳಿಂದ ಪ್ರತಿನಿತ್ಯ ಉಡುಪಿಗೆ ಬಂದು ಹೋಗುವ ಸಾವಿರಾರು ಸಾರ್ವಜನಿಕರು ಇಲ್ಲಿನ ರಾಷ್ಟ್ರೀಯ ಹೆದ್ದಾರಿ ತೀರಾ ಹದೆಗೆಟ್ಟಿರುವು ದರಿಂದ ತುಂಬಾ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಇಲ್ಲಿನ ರಸ್ತೆಯು ಸಂಪೂರ್ಣ ದೊಡ್ಡ ದೊಡ್ಡ ಹೊಂಡ ಗುಂಡಿಗಳಿಂದ ತುಂಬಿರುವುದರಿಂದ ಹಲವು ಅಪಘಾತಗಳು ಸಂಭವಿ ಸಿದ್ದು ರಾಷ್ಟ್ರೀಯ ಹೆದ್ದಾರಿಯನ್ನು ಶೀಘ್ರ ದುರಸ್ತಿಗೊಳಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಕಡೆಕಾರ್ ಗ್ರಾಪಂ ಉಪಾಧ್ಯಕ್ಷ ನವೀನ್ ಶೆಟ್ಟಿ, ಮಾಜಿ ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಯುವರಾಜ್ ಪುತ್ತೂರು, ಸಂಧ್ಯಾ ತಿಲಕ್‌ರಾಜ್, ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳಾದ ಶರತ್ ಶೆಟ್ಟಿ, ಶಶಿರಾಜ್ ಕುಂದರ್, ಸತೀಶ್ ಕೊಡವೂರು, ನಾರಾಯಣ ಕುಂದರ್, ಸತೀಶ್ ಪುತ್ರನ್, ಭರತ್ ಮಣಿಪಾಲ, ಅರ್ಚನಾ ದೇವಾಡಿಗ, ಸಂಜಯ್ ಆಚಾರ್ಯ, ಬ್ರಹ್ಮಾವರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ್ ನಾಯರಿ, ಸಾಗರ್ ಸನಿಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News