×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2025-02-10 21:04 IST

ಕೋಟ, ಫೆ.10: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಯಡಾಡಿ ಮತ್ಯಡಿ ಗ್ರಾಮದ ರಾಜು ಎಂಬವರ ಪತ್ನಿ ಸುಶೀಲ (40) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಫೆ.9ರಂದು ಸಂಜೆ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಬಾಗಲಕೋಟೆ ಮೂಲದ ಬನ್ನಂಜೆ ಬಾಡಿಗೆ ಮನೆ ನಿವಾಸಿ ಪರಸಪ್ಪ ಅರಮನಿ(38) ಎಂಬವರು ಕೌಟುಂಬಿಕ ಕಲಹದಿಂದ ಬೇಸತ್ತು ಫೆ.9ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News