×
Ad

‘ಹೊಂಬೆಳಕು’ ಕ್ರೀಡೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Update: 2025-02-11 18:12 IST

ಉಡುಪಿ: ಗ್ರಾಮ ಸ್ವರಾಜ್ ಪ್ರತಿಷ್ಠಾನದ ಆಶ್ರಯದಲ್ಲಿ ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಪ್ರಾಂಗಣದಲ್ಲಿ ಫೆ.22ರಂದು ನಡೆಯಲಿರುವ ಗ್ರಾಮ ಪಂಚಾಯತ್, ನಗರ ಸ್ಥಳೀಯಾಡಳಿತ ಚುನಾಯಿತ ಪ್ರತಿನಿಧಿಗಳು ಮತ್ತು ಸಿಬ್ಬಂದಿಗಳ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ’ಹೊಂಬೆಳಕು’ ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಉಡುಪಿ ಅಂಬಲಪಾಡಿಯ ಹೊಟೇಲ್ ಸಭಾಂಗಣದಲ್ಲಿ ಮಂಗಳವಾರ ಜರಗಿತು.

ಆಮಂತ್ರಣ ಪತ್ರ ಬಿಡುಗಡೆಗೊಳಿಸಿದ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ಕ್ರೀಡಾಕೂಟ ವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ ಖರ್ಗೆ ಉದ್ಘಾಟಿಸಲಿರುವರು. ಪಥಸಂಚಲನಕ್ಕೆ ಸಂಸದ ಜಿ.ಸಿ.ಚಂದ್ರಶೇಖರ್ ಚಾಲನೆ ನೀಡಲಿರುವರು. ಸಚಿವ ಶಿವರಾಜ್ ಎಸ್.ತಂಗಡಗಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿ ರುವರು ಎಂದರು.

’ಪಥ ಸಂಚಲನದಲ್ಲಿ ನನ್ನ ಕನಸಿನ ಭಾರತ, ಗ್ರಾಮ ಸ್ವರಾಜ್ಯ ಹಾಗೂ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವುದಕ್ಕೆ ಅವಕಾಶವಿದೆ. ವಿಜೇತರಿಗೆ ಪ್ರಥಮ ೫೦ಸಾವಿರ ರೂ., ದ್ವಿತೀಯ ೨೫ಸಾವಿರ ರೂ. ನಗದು ಬಹುಮಾನ ನೀಡಲಾಗು ವುದು ಎಂದ ಅವರು, ಕಳೆದ ವರ್ಷದ ಕ್ರೀಡಾಕೂಟದ ಯಶಸ್ಸನ್ನು ಗಮನಿಸಿ, ಸಚಿವ ಪ್ರಿಯಾಂಕ್ ಖರ್ಗೆ ಎಲ್ಲಾ ಜಿಲ್ಲೆಗಳಲ್ಲಿ ಈ ಕ್ರೀಡಾಕೂಟವನ್ನು ವಿಸ್ತರಿಸುವ ನಿಟ್ಟಿನಲ್ಲಿ ಈ ಬಾರಿ ಪೈಲೆಟ್ ಯೋಜನೆಯಾಗಿ ಕೈಗೆತ್ತಿಕೊಳ್ಳಲಾಗಿದೆ. ಈ ಸಂಬಂಧ ವರದಿ ಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು.

ಅವಿಭಜಿತ ದಕ್ಷಿಣ ಕನ್ನಡದಲ್ಲಿ 355 ಗ್ರಾಪಂಗಳಿದ್ದು, 6082 ಸದಸ್ಯರು ಮತ್ತು 2500 ಸಿಬ್ಬಂದಿಗಳು ಇದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಸುಮಾರು 200 ಗ್ರಾಪಂ ಸದಸ್ಯರು ಮತ್ತು ಸಿಬ್ಬಂದಿ ವರ್ಣರಂಜಿತ ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿ ಯಾಗಿ ಜಾರಿಗೆ ತಂದ ಗ್ರಾಮ ಪಂಚಾಯಿತಿಗಳಿಗೆ ಈ ಸಂದರ್ಭದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ಅಶೋಕ್ ಕುಮಾರ್ ಕೊಡವೂರು, ರಾಜು ಪೂಜಾರಿ, ಉದಯ್ ಕುಮಾರ್ ಶೆಟ್ಟಿ, ರೋಶನಿ ಒಲಿವರ್, ಪ್ರತಿಷ್ಠಾನ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಲೊರೇನ್ಸ್ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News