ದೀನದಯಾಳ್ ಜೀವನ ಆದರ್ಶ ಎಲ್ಲರಿಗೂ ಮಾದರಿ: ಕಿಶೋರ್ ಕುಮಾರ್
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಪಂಡಿತ್ ದೀನದ ಯಾಳ್ ಉಪಾಧ್ಯಾಯ ಅವರ ‘ಬಲಿದಾನ ದಿನ’ವನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಆಚರಿಸ ಲಾಯಿತು.
ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಪಂಡಿತ್ ದೀನದಯಾಳ್ ಅವರ ಜೀವನ ಆದರ್ಶ ಎಲ್ಲರಿಗೂ ಮಾದರಿ. ಬಿಜೆಪಿ ಪಕ್ಷ ಇಂದು ಸದೃಢವಾಗಿ ಬೆಳೆದು ನಿಲ್ಲಲು ದೀನದಯಾಳ್ ಅವರಂತಹ ಹಿರಿಯರ ಕೊಡುಗೆ ಬಹಳಷ್ಟಿದೆ. ಅವರ ಸಂಸ್ಮರಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಪಕ್ಷವನ್ನು ಕಟ್ಟಿ ಬೆಳೆಸಿದ ವರನ್ನು ಆಗಾಗ ನೆನೆಸಿ ಕೊಳ್ಳಬೇಕು. ಇದು ಪಕ್ಷದ ಹಲವು ಧ್ಯೇಯೊದ್ದೇಶಗಳಲ್ಲಿ ಒಂದಾಗಿದೆ ಎಂದರು.
ಈ ಸಂದರ್ಭದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ‘ಪುಷ್ಪಾರ್ಚನೆ’ ಸಲ್ಲಿಸಲಾಯಿತು. ಬಿಜೆಪಿ ಚಟುವಟಿಕೆಗೆ ’ಸಮರ್ಪಣಾ ನಿಧಿ ಅರ್ಪಣೆ’ ಮಾಡಲಾಯಿತು. ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪಂಡಿತ್ ದೀನದಯಾಳ್ ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಶ್ಮಾ ಉದಯ್ ಶೆಟ್ಟಿ ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.