×
Ad

ಉಡುಪಿ: ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ

Update: 2025-02-11 20:52 IST

ಉಡುಪಿ, ಫೆ.11: ಫೆ.19ರಂದು ನಗರದ ಅಜ್ಜರಕಾಡಿನ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಕೌಶಲ್ಯ ರೋಜ್‌ಗಾರ್ ಉದ್ಯೋಗ ಮೇಳದ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಇಂದು ಬಿಡುಗಡೆಗೊಳಿಸಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪೋಸ್ಟರ್‌ನ್ನು ಬಿಡುಗಡೆಗೊಳಿಸಿ ಫೆ.19ರ ಉದ್ಯೋಗ ಮೇಳವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News