ರಾಜ್ಯ ಸರಕಾರ ವಜಾಕ್ಕೆ ಆಗ್ರಹಿಸಿ ಉಡುಪಿ ಡಿಸಿ ಮೂಲಕ ರಾಜ್ಯಪಾಲರಿಗೆ ಮನವಿ
Update: 2025-02-12 20:42 IST
ಉಡುಪಿ, ಫೆ.12: ಮೈಸೂರಿನ ಉದಯಗಿರಿ ಪ್ರಕರಣದಲ್ಲಿ ಪೊಲಿಸರಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥಿತೆ ಸಂಪೂರ್ಣ ಹದಗೆಟ್ಟಿದೆ. ಆದುದರಿಂದ ರಾಜ್ಯ ಸರಕಾರವನ್ನು ವಜಾಗೊಳಿಸಲು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ಗ್ರಹಿಸಿ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾದ ವತಿಯಿಂದ ರಾಜ್ಯಪಾಲರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಯುವ ಮೋರ್ಚಾ ಪ್ರಧಾನ ಕಾರ್ಯ ದರ್ಶಿಗಳಾದ ಅಭಿರಾಜ್ ಸುವರ್ಣ, ಶಶಾಂಕ್ ಶಿವತ್ತಾಯ, ಉಪಾಧ್ಯಕ್ಷ ಸಚಿನ್ ಪಿತ್ರೋಡಿ, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ಶ್ರೀವತ್ಸ, ಪ್ರಧಾನ ಕಾರ್ಯದರ್ಶಿ ನಿತಿನ್ ಪೈ ಮಣಿಪಾಲ, ನಗರ ಯುವಮೋರ್ಚಾ ಕಾರ್ಯದರ್ಶಿ ಧನುಷ್ ಶೆಟ್ಟಿ, ಕಾರ್ಯಾಲಯ ಕಾರ್ಯದರ್ಶಿ ಭೂಷಣ್, ಅಜಿತ್ ಜೋಗಿ ಉಪಸ್ಥಿತರಿದ್ದರು.