×
Ad

ಅಕ್ರಮ ಗಣಿಗಾರಿಕೆಗೆ ದಾಳಿ: ಓರ್ವ ವಶಕ್ಕೆ

Update: 2025-02-12 21:00 IST

ಕೋಟ, ಫೆ.12: ಶಿರಿಯಾರ ಗ್ರಾಮದ ಹೆಬ್ಬಾರ್‌ಬೆಟ್ಟು ಎಂಬಲ್ಲಿರುವ ಸರಕಾರಿ ಜಾಗದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆಗೆ ಫೆ.11ರಂದು ದಾಳಿ ನಡೆಸಿದ ಅಧಿಕಾರಿಗಳ ತಂಡ ಓರ್ವನನ್ನು ವಶಕ್ಕೆ ಪಡೆದುಕೊಂಡಿದೆ.

ಖಚಿತ ಮಾಹಿತಿಯಂತೆ ಭೂವಿಜ್ಞಾನಿ ಅಶ್ವಿನಿ, ಪೊಲೀಸ್ ಅಧಿಕಾರಿ ಸಿಬ್ಬಂದಿಯವರೊಂದಿಗೆ ಅಕ್ರಮ ಗಣಿಗಾರಿಕೆಗೆ ದಾಳಿ ನಡೆಸಿದ್ದು, ಈ ವೇಳೆ ವಿರೇಂದ್ರ ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನೋರ್ವ ಆರೋಪಿ ಸುಧೀಂದ್ರ ಓಡಿ ಪರಾರಿಯಾಗಿದ್ದಾನೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News