×
Ad

ಡಾ. ಬಾಬು ಜಗಜೀವನರಾಮ, ಡಾ.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2025-02-12 21:26 IST

ಉಡುಪಿ, ಫೆ.12: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನ ಡಾ. ಬಾಬು ಜಗಜೀವನರಾಮ್‌ರ 118ನೇ ಹಾಗೂ ಡಾ. ಬಿ.ಆರ್ ಅಂಬೇಡ್ಕರ್‌ರ 134ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಜನಾಂಗದವರ ಕುರಿತಂತೆ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಡಾ.ಬಾಬು ಜಗಜೀವನರಾಮ್ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಪರವಾಗಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಂದ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆಬ್ರವರಿ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕು ಅಥವಾ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News