×
Ad

ಮುಕ್ತ ವಿವಿ ಪ್ರವೇಶ ಆರಂಭ

Update: 2025-02-12 21:27 IST

ಉಡುಪಿ, ಫೆ.12: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಉಡುಪಿ ಪ್ರಾದೇಶಿಕ ಕೇಂದ್ರದಲ್ಲಿ 2024-25ನೇ ಜನವರಿ ಆವೃತ್ತಿಯಲ್ಲಿ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲೂ, ಬಿ.ಲಿಬ್.ಐ.ಎಸ್.ಸ್ಸಿ ಮತ್ತು ಎಲ್ಲಾ ಬಿ.ಎಸ್ಸಿ, ಸ್ನಾತಕೋತ್ತರ ಪದವಿಗಳಾದ ಎಂ.ಎ/ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲೂ, ಎಂ.ಲಿಬ್.ಐ.ಎಸ್.ಸ್ಸಿ ಮತ್ತು ಎಲ್ಲಾ ಎಂ.ಎಸ್ಸಿ ಪದವಿಗಳು, ಡಿಪ್ಲೋಮಾ, ಪಿಜಿ ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶ ಪ್ರಾರಂಭವಾಗಿದ್ದು, ಆಸಕ್ತರು ಪ್ರಾದೇಶಿಕ ಕೇಂದ್ರದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ - www.ksoumysuru.ac.in - ಅನ್ನು ಸಂಪರ್ಕಿಸ ಬಹುದು ಎಂದು ಉಡುಪಿ ಪ್ರಾದೇಶಿಕ ಕೇಂದ್ರದ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News