×
Ad

ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ

Update: 2025-02-13 20:13 IST

ಉಡುಪಿ, ಫೆ.13: ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋಧಿಸಿ ಎಸ್‌ಡಿಪಿಐ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಮಸೂದೆಯ ಪ್ರತಿಯನ್ನು ಹರಿಯುವ ಮೂಲಕ ಪ್ರತಿಭಟನೆ ನಡೆಸಲಾಯಿತು.

ಎಸ್‌ಡಿಪಿಐ ಉಡುಪಿ ಜಿಲ್ಲಾ ಉಪಾಧ್ಯಕ್ಷ ಹನೀಫ್ ಮೂಳೂರು ಮಾತನಾಡಿ, ವಕ್ಫ್ ತಿದ್ದುಪಡಿ ಕಾಯ್ದೆ ಅಸಂವಿಧಾನಿಕ ಹಾಗೂ ಮುಸ್ಲಿಂ ವಿರೋಧಿಯಾಗಿದ್ದು ಅದನ್ನು ಎಸ್‌ಡಿಪಿಐ ವಿರೋಧಿಸುತ್ತದೆ ಎಂದು ಹೇಳಿದರು.

ಎಸ್‌ಡಿಪಿಐ ಉಡುಪಿ ಕ್ಷೇತ್ರ ಸಮಿತಿ ಉಪಾಧ್ಯಕ್ಷ ರಹೀಮ್ ಆದಿಉಡುಪಿ ಮಾತನಾಡಿ, ಯಾವುದೇ ಕಾರಣಕ್ಕೂ ಈ ಕಾಯ್ದೆಯನ್ನು ಜಾರಿಗೆ ತರಲು ನಾವು ಬಿಡುವುದಿಲ್ಲ. ಒಂದು ವೇಳೆ ಕೇಂದ್ರ ಸರಕಾರ ಈ ಕಾಯ್ದೆಯನ್ನ ವಾಪಸ್ ಪಡೆಯದೆ ಇದ್ದರೆ ಸಿಎಎ-ಎನ್‌ಆರ್‌ಸಿ ಮಾದರಿಯಲ್ಲಿ ಜನಾಂದೋಲನವನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ, ಜಿಲ್ಲಾ ಉಪಾಧ್ಯಕ್ಷ ನಝೀರ್ ಅಹಮದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝಾಕ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News