×
Ad

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ

Update: 2025-02-14 20:41 IST

ಉಡುಪಿ, ಫೆ.14: ಕರ್ನಾಟಕ ಸರಕಾರ ಮತ್ತು ಜನ ಆರೋಗ್ಯ ಕೇಂದ್ರ, ಎಪಿಡಮಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇದರ ಜಂಟಿ ಆಶ್ರಯ ದಲ್ಲಿ ಯುವ ಸ್ಪಂದನ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆ ಮೂಲಕ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲಾಗುತ್ತಿದೆ.

ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನದ ಆಧಾರದ ಮೇರೆಗೆ ಯುವ ಪರಿವರ್ತಕರ ಹುದ್ದೆಗೆ ನೇಮಕ ಮಾಡಿಕೊಳ್ಳಲು ಯಾವುದೇ ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ, ಕನಿಷ್ಠ 21ರಿಂದ 35 ವರ್ಷದೊಳಗಿನ, ಕನ್ನಡ ಸ್ಪಷ್ಟವಾಗಿ ಮಾತನಾಡುವ ಹಾಗೂ ಸಂವಹನ ಕಲೆ ಕೌಶಲ್ಯ ಹೊಂದಿರುವ ಆಸಕ್ತ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತಾ ಮಾನದಂಡಗಳನ್ನು ಹೊಂದಿದ ಅಭ್ಯರ್ಥಿಗಳು ಅರ್ಜಿಯನ್ನು ಬಿಳಿಹಾಳೆಯಲ್ಲಿ ಸಂಪೂರ್ಣ ಹೆಸರು, ವಯಸ್ಸು, ವಿಳಾಸ ಹಾಗೂ ತಮ್ಮ ಮೂಲ ದಾಖಲಾತಿಗಳನ್ನು ಫೆಬ್ರವರಿ 28ರೊಳಗೆ ಖುದ್ದಾಗಿ ಉಪ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಇಲ್ಲಿಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News