×
Ad

ಮಂಚಿ: ಕೋಟಿ ವೆಚ್ಚದ ಕೊರಗ ಸಮುದಾಯ ಭವನಕ್ಕೆ ಶಿಲಾನ್ಯಾಸ

Update: 2025-02-14 21:33 IST

ಉಡುಪಿ, ಫೆ.14: ಉಡುಪಿ ನಗರಸಭೆಯ ಇಂದ್ರಾಳಿ ವಾರ್ಡಿನ ಮಂಚಿ ಕೊರಗ ಕಾಲನಿಯಲ್ಲಿ ಉಡುಪಿ ನಗರಸಭೆಯ ನಗರೋತ್ಥಾನ ಯೋಜನೆಯಡಿ ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕೊರಗ ಸಮುದಾಯ ಭವನಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರಗ ಸಮುದಾಯದ ಆಶೋತ್ತರಗಳ ಈಡೇರಿಕೆಗೆ ವಿಶೇಷ ಆದ್ಯತೆ ನೀಡುವ ನಿಟ್ಟಿನಲ್ಲಿ ಸುಸಜ್ಜಿತ ಸಮುದಾಯ ಭವನಕ್ಕೆ 1 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಅತೀ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಂಡು ಸಮುದಾಯದ ಆಭಿವೃದ್ಧಿ ಪರ ಕಾರ್ಯಕ್ರಮಗಳಿಗೆ ಈ ಸಮುದಾಯ ಭವನ ಸದುಪಯೋಗವಾಗಲಿ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷ ರಜನಿ ಹೆಬ್ಬಾರ್, ನಗರಸಭಾ ಸದಸ್ಯ ರಾದ ಅಶೋಕ್ ನಾಯ್ಕ್, ಬಾಲಕೃಷ್ಣ ಶೆಟ್ಟಿ, ಸುಮಿತ್ರಾ ನಾಯಕ್, ಗಿರಿಧರ ಆಚಾರ್ಯ, ಹರೀಶ್ ಶೆಟ್ಟಿ, ಕಲ್ಪನಾ ಸುಧಾಮ, ಪಕ್ಷದ ಪ್ರಮುಖರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News