ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನಾಚರಣೆ
ಮಣಿಪಾಲ, ಫೆ.16: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನವನ್ನು ಶನಿವಾರ ಆಸ್ಪತ್ರೆಯ ಸಭಾಂಗಣದಲ್ಲಿ ಆಚರಿಸಲಾಯಿತು.
ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಮಕ್ಕಳು, ಅವರ ಆರೈಕೆದಾರರು ಮತ್ತು ಕ್ಯಾನ್ಸರ್‌ನಿಂದ ಗಣಮುಖರಾದವರು ಬಾಲ್ಯದ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಿದರು. ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು ಮತ್ತು ಅವರ ಕುಟುಂಬಗಳಿ ಗಾಗಿ ಮನರಂಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮಣಿಪಾಲ ಕೆಎಂಸಿ ಡೀನ್ ಡಾ.ಪದ್ಮರಾಜ್ ಹೆಗ್ಡೆ, ಬಾಲ್ಯದ ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸಮುದಾಯದ ಒಳಗೊ ಳ್ಳುವಿಕೆಯ ನಿರ್ಣಾಯಕ ಪಾತ್ರವನ್ನು ತಿಳಿಸಿದರು. ಸಮಗ್ರ ಆರೈಕೆಯನ್ನು ಒದಗಿಸುವಲ್ಲಿ ಮತ್ತು ಪ್ರತಿ ಮಗುವೂ ಅರ್ಹವಾದ ಚಿಕಿತ್ಸೆಯನ್ನು ಪಡೆಯುವುದನ್ನು ಖಚಿತಪಡಿಸಿ ಕೊಳ್ಳುವಲ್ಲಿ ಸಹಯೋಗದ ಪ್ರಯತ್ನ ಮಹತ್ವವಾಗಿದೆ ಎಂದರು.
ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಆಸ್ಪತ್ರೆಯ ನರ್ಸಿಂಗ್ ಸೇವೆಗಳ ಮುಖ್ಯಸ್ಥೆ ಡಾ.ಸುಬಾ ಸೂರಿಯ, ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್‌ನ ಸಂಸ್ಥಾಪಕ ಅರ್ಜುನ್ ಭಂಡಾರ್ಕರ್ ಮತ್ತು ಒನ್ ಗುಡ್ ಸ್ಟೆಪ್ ಫೌಂಡೇಶನ್ ಸಂಸ್ಥಾಪಕಿ ಅಮಿತಾ ಪೈ ಉಪಸ್ಥಿತರಿದ್ದರು. ಕಸ್ತೂರ್ಬಾ ಆಸ್ಪತ್ರೆಯ ಮಕ್ಕಳ ಕ್ಯಾನ್ಸರ್ ವಿಭಾಗದ ಮುಖ್ಯಸ್ಥ ಡಾ.ವಾಸುದೇವ ಭಟ್ ಕಾರ್ಯಕ್ರಮ ಸಂಯೋಜಿಸಿದ್ದರು.