×
Ad

ಮಲ್ಪೆ ಬಹದ್ದೂರ್ ಘಡ, ಕೋಟೆ ದ್ವೀಪಗಳ ಸಮಗ್ರ ಅಭಿವೃದ್ಧಿ: ಅಧಿಕಾರಿಗಳಿಂದ ಪರಿಶೀಲನೆ

Update: 2025-02-18 19:40 IST

ಮಲ್ಪೆ, ಫೆ.18: ಮಲ್ಪೆಕರಾವಳಿ ಕಾವಲು ಪೊಲೀಸ್ ಠಾಣಾ ವ್ಯಾಪ್ತಿಯ ದರಿಯಾ ಬಹದ್ದೂರ್ ಘಡ(ಲೈಟ್‌ಹೌಸ್) ದ್ವೀಪ ಹಾಗೂ ಕೋಟೆ ದ್ವೀಪಗಳಿಗೆ ಭದ್ರತೆ, ಸ್ವಚ್ಚತೆ ಹಾಗೂ ಸಮಗ್ರ ಅಭಿವೃದ್ಧಿ ಉದ್ದೇಶದೊಂದಿಗೆ ಶಾಸಕರು, ಉನ್ನತ ಅಧಿಕಾರಿಗಳು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ನೇತತ್ವದಲ್ಲಿ ಉಡುಪಿ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ., ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಮಿಥುನ್ ಎಚ್.ಎನ್. ಮಾರ್ಗದರ್ಶನದಲ್ಲಿ ಬಹದ್ದೂರ್ ಘಡ ದ್ವೀಪ ಹಾಗೂ ಕೋಟೆ ದ್ವೀಪಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕರಾವಳಿ ಕಾವಲು ಪೊಲೀಸ್ ಉಪಾಧೀಕ್ಷಕ ತುಳಜಪ್ಪ ಸುಲ್ಫಿ, ಸಿ.ಎಸ್.ಪಿ ಕೇಂದ್ರ ಕಛೇರಿಯ ಅಧಿಕಾರಿ ಸಿಬ್ಬಂದಿಗಳು, ಮಲ್ಪೆ ಕರಾವಳಿ ಕಾವಲು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಅಧಿಕಾರಿ, ಸಿಬ್ಬಂದಿ, ಮಲ್ಪೆ ಪೊಲೀಸ್ ಠಾಣಾ ಅಧಿಕಾರಿ, ಸಿಬ್ಬಂದಿ, ಕೆ.ಎನ್.ಡಿ ಸಿಬ್ಬಂದಿ, ಉಡುಪಿ ನಗರಸಭೆಯ ಪೌರಕಾರ್ಮಿಕರು, ಬಂದರು ಇಲಾಖೆಯ ಅಧಿಕಾರಿಗಳು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಸ್ಥಳೀಯ ವೈದ್ಯಾಧಿಕಾರಿಗಳು, ಅಗ್ನಿ ಶಾಮಕದಳದ ಅಧಿಕಾರಿ ಸಿಬ್ಬಂದಿ, ಅರಣ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿ ಹಾಗೂ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಮತ್ತು ಮೀನುಗಾರರ ಸಂಘಟನೆಯ ಪದಾಧಿಕಾರಿಗಳು, ಉರಗ ತಜ್ಞ ಸ್ನೇಕ್ ಬಾಬಣ್ಣ ಹಾಗೂ ಜಲ ಕ್ರೀಡಾ ತರಬೇತುದಾರರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News