ರೈಲು ಢಿಕ್ಕಿ ಹೊಡೆದು ಅಪರಿಚಿತ ಮೃತ್ಯು
Update: 2025-02-19 21:27 IST
ಸಾಂದರ್ಭಿಕ ಚಿತ್ರ
ಕುಂದಾಪುರ, ಫೆ.19: ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಫೆ.18ರಂದು ಬೆಳಗ್ಗೆ ಕಟ್‌ಬೇಲ್ತೂರು ಗ್ರಾಮದ ಶ್ರೀಭದ್ರ ಮಹಾಕಾಳಿ ದೇವಸ್ಥಾನದ ಬಳಿ ನಡೆದಿದೆ.
ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಪಂಚಗಂಗಾ ಎಕ್ಸ್‌ಪ್ರೆಸ್ ರೈಲು ಸುಮಾರು 30 ವರ್ಷ ವಯಸ್ಸಿನ ವ್ಯಕ್ತಿಗೆ ಢಿಕ್ಕಿ ಹೊಡೆದಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿ ದ್ದಾರೆಂದು ತಿಳಿದು ಬಂದಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.