ಶಾಲೆಗೆ ನುಗ್ಗಿ ನಗದು ಕಳವು: ಪ್ರಕರಣ ದಾಖಲು
Update: 2025-02-22 21:03 IST
ಕಾರ್ಕಳ, ಫೆ.22: ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಗೆ ಫೆ.21ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು, ಲಕ್ಷಾಂತರ ರೂ. ನಗದು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಶಾಲೆಯ ಮುಖ್ಯೋಪಾಧ್ಯಾಯರ ಕಛೇರಿಯ ಬಾಗಿಲಿನ ಬೀಗ ಒಡೆದು ಒಳಗೆ ಪ್ರವೇಶಿಸಿದ ಕಳ್ಳರು, ಕಪಾಟಿನಲ್ಲಿದ್ದ 1,50,000ರೂ. ನಗದು ಮತ್ತು 3 ಡಿವಿಯರ್‌ಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಅಲ್ಲದೆ ಶಾಲೆಯ ಸಿಸಿಟಿವಿ ಯನ್ನು ಹಾಳು ಮಾಡಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.