ಯುವಕ ನಾಪತ್ತೆ
Update: 2025-02-25 20:01 IST
ಉಡುಪಿ, ಫೆ.25: ಮಲ್ಪೆ ಬಂದರಿನ ಕಚೇರಿಯೊಂದರಲ್ಲಿ ರೈಟರ್ ಆಗಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಬಡಾನಿಡಿಯೂರು ಗ್ರಾಮದ ಕದಿಕೆ ನಿವಾಸಿ ನಯನ್ ಕುಮಾರ್ ಎಂಬ ಯುವಕ ಫೆ.8ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 10 ಇಂಚು ಎತ್ತರ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡು ತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸ ಬಹುದು ಎಂದು ಪ್ರಕಟಣೆ ತಿಳಿಸಿದೆ.