×
Ad

ಉಡುಪಿ ಜಿಲ್ಲಾಮಟ್ಟದ ಕ್ಲಬ್ ಬುಲ್‌ಬುಲ್ ಉತ್ಸವ

Update: 2025-02-25 20:05 IST

ಉಡುಪಿ, ಫೆ.25: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ ಕ್ಲಬ್ ಬುಲ್‌ ಬುಲ್ ಉತ್ಸವವನ್ನು ಪುತ್ತಿಗೆ ಪರ್ಯಾಯ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಸ್ವಾಮೀಜಿ, ಶ್ರೀಕೃಷ್ಣನಿಗೆ ಮಕ್ಕಳು ಅಂದರೆ ಬಹಳ ಪ್ರೀತಿ. ಕೃಷ್ಣನು ತನ್ನ ಸಂಗಡಿಗರೊಂದಿಗೆ ಬಾಲಲೀಲೆಗಳ ಮುಖಾಂತರ ಎಲ್ಲರ ಮನ ಸೆಳೆದವನು. ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಶ್ರೀಕೃಷ್ಣನ ಫ್ರೆಂಡ್ಸ್ ಇದ್ದಂತೆ ಎಂದು ಹೇಳಿದರು.

ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಜಿಲ್ಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಸ್ಕೌಟಿಂಗ್ ಚಳುವಳಿಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸ್ಕೌಟ್ ಅಯುಕ್ತ ಜನಾರ್ದನ್ ಕೊಡವೂರು, ಜಿಲ್ಲಾ ಉಪಾಧ್ಯಕ್ಷ ಎಡ್ವಿನ್ ಆಳ್ವ, ಜಿಲ್ಲಾ ಕಾರ್ಯ ದರ್ಶಿ ಆನಂದ್ ಬಿ.ಅಡಿಗ, ಜಿಲ್ಲಾ ತರಬೇತಿ ಆಯುಕ್ತ ಉದಯ ಭಾಸ್ಕರ್ ಶೆಟ್ಟಿ, ಮಠದ ರಮೇಶ್ ಭಟ್, ಮುಕುಂದ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸುಜಾತ ಶೆಟ್ಟಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನಾ ಶೇಖರ್ ಉಪಸ್ಥಿತರಿದ್ದರು.

ಕಪ್ ಬುಲ್ ಬುಲ್ ಉತ್ಸವದಲ್ಲಿ ಮಕ್ಕಳಿಗೆ ವಿವಿಧ ತರಬೇತಿಗಳು, ಮಾಹಿತಿಗಳು, ಆಟೋಟಗಳು ಮುಂತಾದ ಕಾರ್ಯಕ್ರಮಗಳು ನಡೆದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News