ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರೋಧಿಸಿ ಪ್ರತಿಭಟನೆ
Update: 2025-03-05 19:01 IST
ಉಡುಪಿ, ಮಾ.5: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ಫೈಝಿ ಯವರನ್ನು ಇಡಿ ಅಕ್ರಮವಾಗಿ ಬಂಧಿಸಿರುವುದನ್ನು ವಿರೋಧಿಸಿ ಎಸ್‌ಡಿಪಿಐ ಉಡುಪಿ ಜಿಲ್ಲೆಯ ವತಿಯಿಂದ ಉಡುಪಿ ಅಜ್ಜರಕಾಡು ಹುತಾತ್ಮರ ಸ್ಮಾರಕ, ಉಚ್ಚಿಲ ಪೇಟೆ ಹಾಗೂ ಗಂಗೊಳ್ಳಿಯ ಜಾಮಿಯಾ ಮೊಹಲ್ಲಾದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಉಡುಪಿ ಕ್ಷೇತ್ರ ಸಮಿತಿ ವತಿಯಿಂದ ಕ್ಷೇತ್ರ ಅಧ್ಯಕ್ಷ ಅಶ್ರಫ್ ಬಾವ ನೇತೃತ್ವದಲ್ಲಿ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆಯನ್ನು ನಡೆಸಲಾಯಿತು. ಉಡುಪಿ ಕ್ಷೇತ್ರ ಸಮಿತಿ ಉಪಾಧ್ಯಕ್ಷ ರಹೀಮ್ ಆದಿಉಡುಪಿ, ಉಡುಪಿ ಜಿಲ್ಲಾ ಸಮಿತಿ ಸದಸ್ಯೆ ನಸೀಮಾ ಫಾತಿಮಾ ಮಾತನಾಡಿದರು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಉಡುಪಿ ಜಿಲ್ಲಾ ನಾಯಕ ಅಬ್ದುಲ್ ಅಜೀಜ್ ಮೊದಲಾದವರು ಉಪಸ್ಥಿತರಿದ್ದರು.