×
Ad

ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

Update: 2025-03-06 18:32 IST

ಉಡುಪಿ: ಉಡುಪಿಯ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ -೨ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ / ವರ್ಗಾವಣೆಯಿಂದ ಭರ್ತಿಗೊಳ್ಳುವವರೆಗೆ ನೇಮಕಾತಿ ಮಾಡಿಕೊಳ್ಳಲು, ಸರಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಬಿ.ಬಿ.ಎಸ್ ಪದವಿ ಹಾಗೂ ಹೌಸ್‌ಮೆನ್‌ಶಿಪ್ ಆಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸೆಸೆಲ್ಸಿ ಅಂಕಪಟ್ಟಿ, ಎಂ.ಬಿ.ಬಿ.ಎಸ್ ಎಲ್ಲಾ ವರ್ಷದ ಅಂಕಪಟ್ಟಿಗಳು, ಪದವಿ ಪ್ರಮಾಣ ಪತ್ರ, ಕೆಎಂಸಿ ರಿಜಿಸ್ಟ್ರೇಷನ್ ಸರ್ಟಿಫಿಕೇಟ್, ಇಂಟರ್ನ್‌ಶಿಪ್ ಪ್ರಮಾಣ ಪತ್ರಗಳನ್ನು ಅರ್ಜಿ ನಮೂನೆಯನ್ನು ಲಗತ್ತಿಸುವುದು ಕಡ್ಡಾಯವಾಗಿದೆ.

ಉಡುಪಿಯ ಜಿಲ್ಲಾ ಆಸ್ಪತ್ರೆಯಲ್ಲಿ ಮಾರ್ಚ್ 10ರಂದು ನಡೆಯುವ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News