×
Ad

ನಿವೃತ್ತ ತಹಶೀಲ್ದಾರ್ ಕೆ.ಎಂ ಸಲೀಂ ಸಾಹೇಬ್ ಕೋಟ ನಿಧನ

Update: 2025-03-06 19:46 IST

ಕೋಟ: ನಿವೃತ್ತ ತಹಶೀಲ್ದಾರ್ ಕೆ.ಎಂ.ಸಲೀಂ ಸಾಹೇಬ್ ಕೋಟ (79) ಅಲ್ಪಕಾಲದ ಅನಾರೋಗ್ಯದಿಂದ ಕೋಟದಲ್ಲಿರುವ ಸ್ವಗೃಹದಲ್ಲಿ ಇಂದು ನಿಧನರಾದರು.

ಕುಂದಾಪುರ ತಾಲೂಕು ಕಚೇರಿಯಲ್ಲಿ ಮ್ಯಾನೇಜರ್ ಆಗಿ, ಬಳಿಕ ಸೋಮವಾರಪೇಟೆ ಸೇರಿದಂತೆ ಹಲವು ಕಡೆಗಳಲ್ಲಿ ಉಪ ತಹಶೀಲ್ದಾರರಾಗಿ ಕಾರ್ಯನಿರ್ವಹಿಸಿದ್ದ ಇವರು, ಉಡುಪಿ ತಾಲೂಕು ತಹಶೀಲ್ದಾರರಾಗಿ ನಿವೃತ್ತಿ ಹೊಂದಿದರು.

ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿದ್ದ ಇವರು, ತನ್ನ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಕಾರ್ಯಕ್ರಮಗಳ ಮೂಲಕ ಜನಮನ್ನಣೆ ಪಡೆದಿದ್ದರು.

ನಿವೃತ್ತಿ ಬಳಿಕ ಇವರು ಉಡುಪಿ ಜಾಮಿಯ ಮಸೀದಿ, ಕುಂದಾಪುರ ಮಸೀದಿಯ ಆಡಳಿತ ಅಧಿಕಾರಿಯಾಗಿ ಕೂಡ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಕೋಟ ಜಾಮೀಯಾ ಮಸೀದಿಯ ಅಧ್ಯಕ್ಷರಾಗಿದ್ದ ಇವರು, ಉಡುಪಿ ಮುಸ್ಲಿಂ ಒಕ್ಕೂಟದ ಮಾಜಿ ಉಪಾಧ್ಯಕ್ಷರಾಗಿ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ, ಮಾಜಿ ಅಧ್ಯಕ್ಷರಾದ ಯಾಸೀನ್ ಮಲ್ಪೆ, ಕೋಟ ಇಬ್ರಾಹಿಂ ಸಾಹೇಬ್  ಹಾಗೂ ಸಮುದಾಯದ ಮುಖಂಡರು ಮತ್ತು ಕೋಟ ಜಮಾತ್ ಬಾಂಧವರು ಸಂತಾಪ ಸೂಚಿಸಿದ್ದಾರೆ.

ಉಡುಪಿಯ ನಿವೃತ್ತ ತಹಶೀಲ್ದಾರ್ ಕೆ.ಎಂ.ಸಲೀಂ ಅವರ ನಿಧನಕ್ಕೆ ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಉಪಾಧ್ಯಕ್ಷ ಎಂ. ಪಿ. ಮೊೃದಿನಬ್ಬ ಸಂತಾಪ ಸೂಚಿಸಿದ್ದಾರೆ. ಉಡುಪಿ ತಾಲೂಕು ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಅವರು ನೂರಾರು ಬಡವರಿಗೆ ನಿವೇಶನ ಹಂಚುವ ಮೂಲಕ ಜನಮಾನಸದಲ್ಲಿ ಅಚ್ಚಲಿಯದೆ ಉಳಿದಿದ್ದಾರೆಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News