×
Ad

ಅಂಬೇಡ್ಕರ್ ತತ್ವ-ಸಿದ್ದಾಂತ ಪಾಲನೆ ಅಗತ್ಯ: ರಾಹುಲ್ ಜಾರಕಿಹೊಳಿ

Update: 2025-03-07 21:17 IST

ಕುಂದಾಪುರ, ಮಾ.೭: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆರ್ಥಿಕವಾಗಿ, ಸಾಮಾಜಿಕ, ಶೈಕ್ಷಣಿಕ ವಾಗಿ ಮುಂದೆ ಬರಲು ಡಾ.ಬಿ.ಆರ್ ಅಂಬೇಡ್ಕರ್ ಅವರ ತತ್ವ-ಸಿದ್ದಾಂತ, ಆದರ್ಶ ಪಾಲನೆ ಅಗತ್ಯ. ಬಾಬಾ ಸಾಹೇಬರು ಶಿಕ್ಷಣದ ಮೂಲಕ ವಿಶ್ವದಲ್ಲಿ ಅತ್ಯಮೂಲ್ಯ ಸಂವಿಧಾನವನ್ನು ದೇಶಕ್ಕೆ ನೀಡಲು ಸಾಧ್ಯವಾಗಿದೆ ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಹೇಳಿದ್ದಾರೆ.

ಕುಂದಾಪುರ ಗಾಂಧಿ ಮೈದಾನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮಾಜ ಬಾಂಧವರಿ ಗಾಗಿ ಜಗದೀಶ್ ಗಂಗೊಳ್ಳಿ ಸಾರಥ್ಯದಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳಅಂತರಾಜ್ಯಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಲೀಗ್ ಕಮ್ ನಾಕೌಟ್ ಕ್ರಿಕೆಟ್ ಪಂದ್ಯಾಕೂಟ ’ಮಹಾನಾಯಕ ಜೈಭೀಮ್’ ಕ್ರಿಕೇಟ್ ಹಬ್ಬವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಭೀಮಘರ್ಜನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಾ. ಉದಯ ಕುಮಾರ್ ತಲ್ಲೂರು ಮಾತನಾಡಿದರು. ಚಿಕ್ಕೋಡಿ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಿದ್ಧಿಕ್, ಉಡುಪಿ ಜಿಲ್ಲಾ ಕಾಂಗ್ರೆಸ್ ಪ.ಜಾತಿ ವಿಭಾಗದ ಅಧ್ಯಕ್ಷ ಜಯಕುಮಾರ್, ಹಾಸನ ಜಿಲ್ಲಾ ವಾಲ್ಮೀಕಿ ನಾಯ್ಕ ಸಂಘದ ಅಧ್ಯಕ್ಷ ಧರ್ಮಪ್ಪನಾಯ್ಕ, ಹಾಸನ ವಾಲ್ಮೀಕಿ ಸಮಾಜದ ಮುಖಂಡರಾದ ಶಿವಪ್ಪನಾಯ್ಕ, ಮಧು ನಾಯ್ಕ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ನರಸಿಂಹ ಹಳಗೇರಿ, ರಾಯಲ್ಸ್ ಇಲೆವೆನ್ ತಂಡದ ಸಂಘಟಕ ದಿನೇಶ್ ಎಸ್., ದ.ಸಂ.ಸ. ಭೀಮಘರ್ಜನೆಯ ಕುಂದಾಪುರ ತಾಲೂಕು ಸಂಘಟನಾ ಸಂಚಾಲಕ ವಿಜಯ್ ಕೆ.ಎಸ್., ತಾಲೂಕು ಸಂಚಾಲಕ ಮಂಜುನಾಥ, ಪತ್ರಕರ್ತ ಯೋಗೀಶ್ ಕುಂಭಾಶಿ ಮೊದಲಾದವರು ಉಪಸ್ಥಿತರಿದ್ದರು. 

ಖಪಂದ್ಯಾವಳಿ ಸಂಯೋಜಕ ಜಗದೀಶ್ ಗಂಗೊಳ್ಳಿ ಸ್ವಾಗತಿಸಿದರು. ಶರತ್ ಕುಂಭಾಶಿ ಕಾರ್ಯಕ್ರಮ ನಿರೂಪಿಸಿ, ಫಝಲ್ ಹೊನ್ನಾಳ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News