ಕೋಡಿ ಬ್ಯಾರೀಸ್ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ
ಕುಂದಾಪುರ, ಮಾ.9: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ದೌರ್ಜನ್ಯ ವಿರೋಧಿ ಮತ್ತು ಪರಿಹಾರ ಘಟಕ ಮತ್ತು ಲಲಿತಕಲಾ ಸಂಘದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ- ಸಬಲೀಕರಣ ಎಂಬ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿಯ ಡಾ.ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಡಳಿತಾಧಿ ಕಾರಿ ಸೌಜನ್ಯ ಶೆಟ್ಟಿ, ಮಹಿಳೆಯರಿಗೆ ಕೆಲಸದ ಬಗ್ಗೆ ಆತ್ಮವಿಶ್ವಾಸ, ನಾಯಕತ್ವದ ಕೌಶಲ್ಯ, ಲಿಂಗ ಸಮಾನತೆ, ಮಹಿಳೆಯರು ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಒತ್ತಡವನ್ನು ಹೇಗೆ ನಿಯಂತ್ರಿಸು ವುದು ಎಂಬುದರ ಬಗ್ಗೆ ಮಾಹಿತಿ ನೀಡಿದರು.
ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಎಂ ಅಬ್ದುಲ್ ರೆಹಮಾನ್ ಬ್ಯಾರಿ ವಹಿಸಿದ್ದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಕಾಡೆಮಿಕ್ ಡೀನ್ ಡಾ. ಪೂರ್ಣಿಮಾ ಟಿ., ಲಲಿತಕಲಾ ಸಂಘದ ಸಂಯೋಜಕಿ ಜಾಸ್ಮಿನ್ ಫೆರ್ನಾಂಡಿಸ್ ಮತ್ತು ಪ್ರಿಯಾ ರೇಗೋ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಆಮ್ನಾ ಹಿಭಾ ಸ್ವಾಗತಿಸಿದರು. ಆಯಿಷಾ ಸನೀನ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಜಾಸ್ಮಿನ್ ಫೆರ್ನಾಂಡಿಸ್ ಅತಿಥಿಗಳನ್ನು ಪರಿಚಯಿಸಿದರು. ಸುಹಾನಾ ವಂದಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕಥೆ ಬರವಣಿಗೆ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಸಾಕ್ಷ್ಯಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.