×
Ad

ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನಗಳ ವಿತರಣೆ

Update: 2025-03-09 18:14 IST

ಕುಂದಾಪುರ, ಮಾ.9: ಉಡುಪಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ರಿಟ್ರೋಫಿಟೆಡ್ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ವಿಶೇಷಚೇತನರಿಗೆ ಶನಿವಾರ ವಿತರಿಸಿದರು.

ಕುಂದಾಪುರ ಪುರಸಭೆ ಅಧ್ಯಕ್ಷ ಕೆ.ಮೋಹನದಾಸ್ ಶೆಣೈ, ಉಪಾಧ್ಯಕ್ಷೆ ವನಿತಾ ಬಿಲ್ಲವ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ್ ವಿ., ಸದಸ್ಯರಾದ ದೇವಕಿ ಸಣ್ಣಯ್ಯ, ಸಂತೋಷ್ ಕುಮಾರ್ ಶೆಟ್ಟಿ, ಪರಿಸರ ಅಭಿಯಂತರ ಗುರುಪ್ರಸಾದ್, ಇಂಜಿನಿಯರ್ ಅರುಣ್ ಬೆರೆಟ್ಟೋ, ಮುಖಂಡ ರಾಜೇಶ್ ಕಾವೇರಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆಯ ಯೋಜನಾ ಸಹಾಯಕ ಶಿವಾಜಿ, ಪ್ರದೀಪ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News