ಬೈಕ್ ಢಿಕ್ಕಿ: ಸೈಕಲ್ ಸವಾರ ಮೃತ್ಯು
Update: 2025-03-09 18:29 IST
ಶಂಕರನಾರಾಯಣ, ಮಾ.9: ಬೈಕೊಂದು ಸೈಕಲ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಬೆಳ್ವೆ ಗ್ರಾಮದ ಗೋಪಾಲ (67) ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಾಮಚಂದ್ರ ಹಾಗೂ ಸಹಸವಾರ ವಸುಂದರ ಎಂಬವರು ಗಾಯಗೊಂಡಿದ್ದಾರೆ.
ಮಾ.7ರಂದು ಸಂಜೆ ಬೆಳ್ವೆ ಕಡೆಯಿಂದ ಗುಮ್ಮಹೊಲ ಕಡೆಗೆ ಹೋಗುತ್ತಿದ್ದ ಬೈಕ್, ಎದುರಿನಲ್ಲಿ ಹೋಗುತ್ತಿದ್ದ ಸೈಕಲ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸೈಕಲ್ ಸವಾರ ಗೋಪಾಲ, ಉಡುಪಿ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಯಾಗದೆ ಮಾ.8ರಂದು ಬೆಳಗ್ಗೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.