×
Ad

ಬೋಧಕ ಸಿಬ್ಬಂದಿಗಳಿಗೆ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ

Update: 2025-03-13 18:24 IST

ಉಡುಪಿ, ಮಾ.13: ಅಜ್ಜರಕಾಡು ಡಾ.ಜಿ.ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಕೋಶದ(ಐಕ್ಯೂಎಸಿ) ವತಿಯಿಂದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮವನ್ನು ಬೋಧಕ ಸಿಬ್ಬಂದಿಗಳಿಗೆ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿಯ ವಕೀಲ ರಾಯನ್ ಫೆರ್ನಾಂಡಿಸ್ ಮಾನವನ ಬೌದ್ಧಿಕ ಆಸ್ತಿ ಹಕ್ಕುಗಳ ಬಗ್ಗೆ ಉಪನ್ಯಾಸ ನೀಡಿದರು. ಎರಡನೆಯ ಅಧಿವೇಶನದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ.ಸುಮುಖ್ ಹುನಗುಂದ್‌ಅಧ್ಯಾಪಕರಿಗೆ ಸಂಶೋಧನಾ ಲೇಖನಗಳನ್ನು ಬರೆಯುವ ವಿಷಯದಲ್ಲಿ ಉಪನ್ಯಾಸ ನೀಡಿದರು

ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಧರ್ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಹಿರಿಯ ಉಪನ್ಯಾಸಕಿ ವಾಣಿಜ್ಯ ಶಾಸ್ತ್ರವಿಭಾಗದ ಮುಖ್ಯಸ್ಥೆ ಗೌರಿ ಎಸ್.ಭಟ್, ಐಕ್ಯೂಎಸಿ ಸಹಸಂಚಾಲಕ ಡಾ.ಉಮೇಶ್ಮಯ್ಯ ಉಪಸ್ಥಿತರಿದ್ದರು.

ಕಾಲೇಜಿನ ಐಕ್ಯೂಎಸಿ ಸಂಚಾಲಕ ಪ್ರೊ. ಶ್ರೀಮತಿ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ ದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಮನೋಜ್ ಹಾಗೂ ಆಂಗ್ಲ ಭಾಷಾ ಉಪನ್ಯಾಸಕಿ ರತ್ನ ಅತಿಥಿ ಗಳನ್ನು ಪರಿಚಯಿಸಿದರು. ಗ್ರಂಥಪಾಲಕ ಡಾ.ವೆಂಕಟೇಶ್ ವಂದಿಸಿದರು. ವಿದ್ಯಾರ್ಥಿನಿ ಶ್ರೀದೇವಿ ಮತ್ತು ಚೈತ್ರ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News