ಪಿಎಚ್‌ಡಿ ಪದವಿ ಪಡೆದ ಡಾ.ಶಮಂತ್ ಕುಮಾರ್‌ಗೆ ಸನ್ಮಾನ
ಕೋಟ, ಮಾ.17: ಕೋಟದ ಪಂಚವರ್ಣ ಯುವಕ ಮಂಡಲ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ವತಿಯಿಂದ ಇತ್ತೀಚಿಗೆ ಪಿಎಚ್ ಡಿ ಪದವಿ ಪಡೆದ ಸಂಸ್ಥೆಯ ಸದಸ್ಯ ಶಮಂತ್ ಕುಮಾರ್ ಕೆ.ಎಸ್ ಇವರಿಗೆ ಪಂಚವರ್ಣ ಗೌರವ ಸಂಮ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ನಿವೃತ್ತ ಪ್ರಾಂಶುಪಾಲ ನಾಗೇಶ್ ಶ್ಯಾನುಬಾಗ್ ಪಿಎಚ್‌ಡಿ ಪದವಿ ಪಡೆದ ಶಮಂತ್ ಕುಮಾರ್ ಕೆ.ಎಸ್ ಅವರನ್ನು ಸನ್ಮಾನಿಸಿದರು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ ಪೂಜಾರಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕೋಟತಟ್ಟು ಗ್ರಾಪಂ ಅಧ್ಯಕ್ಷ ಸತೀಶ್ ಕುಂದರ್, ಹಿರಿಯ ಸಾಹಿತಿ ಶಾಂತಾ ಬಿ.ಐತಾಳ್, ಪಂಚವರ್ಣ ಯುವಕಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಶಮಂತ್ ಕುಮಾರ್ ತಂದೆ ಶ್ರೀಧರ ಗಾಣಿಗ, ಸಹೋದರಿ ಶಿಲ್ಪಾವಿ.ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.
ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು. ಸಂಚಾಲಕಿ ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಯುವಕ ಮಂಡಲದ ಸದಸ್ಯ ಕೇಶವ ಆಚಾರ್ ವಂದಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.