×
Ad

ಮರಳು, ಮಣ್ಣು ಸಾಗಾಟ ವಾಹನಗಳಿಗೆ ಸೂಚನೆ

Update: 2025-03-18 21:18 IST

ಉಡುಪಿ, ಮಾ.18: ಜಿಲ್ಲೆಯಲ್ಲಿ ಮರಳು ಮತ್ತು ಮಣ್ಣು ಸಾಗಾಟ ಮಾಡುವ ವಾಹನಗಳು ಟರ್ಪಾಲ್‌ನಿಂದ ಮುಚ್ಚದೇ ಸಾಗಾಟ ಮಾಡುತ್ತಿರುವುದರಿಂದ ಇತರ ವಾಹನ ಚಾಲಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಸಾಕಷ್ಟು ದೂರುಗಳು ಬಂದಿವೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮರಳು ಮತ್ತು ಮಣ್ಣು ಸಾಗಾಟ ಮಾಡುವ ಎಲ್ಲಾ ವಾಹನಗಳು ಕಡ್ಡಾಯವಾಗಿ ಟರ್ಪಾಲ್‌ನಿಂದ ಮುಚ್ಚಿ ಸಾಗಾಟ ಮಾಡುವಂತೆ ಸಂಬಂಧಪಟ್ಟ ಎಲ್ಲಾ ವಾಹನಗಳ ಚಾಲಕರು ಹಾಗೂ ಮಾಲಕರು ಕ್ರಮಕೈಗೊಳ್ಳಬೇಕು. ತಪ್ಪಿದ್ದಲ್ಲಿ ದಂಡ ವಿಧಿಸಿ ಅಂತಹ ವಾಹನಗಳ ಪರವಾನಿಗೆಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News