×
Ad

ಎಲ್ಲಾ ಮಂಡಲಗಳಲ್ಲಿ ವಾಜಪೇಯಿ ಜನ್ಮ ಶತಾಬ್ದಿ ಆಚರಣೆ: ಕಿಶೋರ್ ಕುಮಾರ್

Update: 2025-03-25 20:49 IST

ಉಡುಪಿ, ಮಾ.25: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಆಚರಣೆಯ ಪ್ರಯುಕ್ತ ’ಅಟಲ್ ವಿರಾಸತ್’ ಕಾರ್ಯಕ್ರಮವನ್ನು ಎಲ್ಲಾ ಮಂಡಲಗಳಲ್ಲಿ ವಿಚಾರ ಸಂಕಿರಣ ಹಾಗೂ ಇತರ ಮಾದರಿ ಕಾರ್ಯಕ್ರಮಗಳೊಂದಿಗೆ ಆಚರಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕರೆ ನೀಡಿದ್ದಾರೆ.

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಇತ್ತೀಚೆಗೆ ಮಲ್ಪೆಯಲ್ಲಿ ನಡೆದ ಪ್ರಕರಣದಲ್ಲಿ ಬಂಧನಕ್ಕೊಳಗಾದ ಮೀನುಗಾರ ಮಹಿಳೆಯರ ಪರ ಮಾತ ನಾಡಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತು ಬಿಜೆಪಿ ಮುಖಂಡ ಮಂಜುನಾಥ್ ಸಾಲ್ಯಾನ್ ಕೊಳ ಅವರ ವಿರುದ್ಧ ಪ್ರಕರಣ ದಾಖಲು ಮಾಡಿರುವುದು ಮತ್ತು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸಹಿತ 18 ಮಂದಿ ಬಿಜೆಪಿ ಶಾಸಕರನ್ನು ಅಧಿಕಾರ ದುರ್ಬಳಕೆ ಮಾಡಿ ಅಮಾನತುಗೊಳಿಸಿರುವ ಸ್ಪೀಕರ್ ನಡೆ ಅತ್ಯಂತ ಖಂಡನೀಯ ಎಂದು ಅವರು ತಿಳಿಸಿದರು.

ರಾಜ್ಯ ಸರಕಾರದ ಸಂವಿಧಾನ ವಿರೋಧಿ ಕಾಂಗ್ರೆಸ್ ವಿರುದ್ಧ ಎಲ್ಲಾ ಮಂಡಲ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆಗೆ ಅವರು ಕರೆ ನೀಡಿದರು. ಉಡುಪಿ ನಗರಸಭಾ ಸದಸ್ಯ ಯೋಗೀಶ್ ಸಾಲ್ಯಾನ್ ಮಲ್ಪೆಯಲ್ಲಿ ನಡೆದ ಮೀನು ಕಳ್ಳತನ ಪ್ರಕರಣ ಹಾಗೂ ಮಲ್ಪೆಬಂದರಿನಲ್ಲಿ ನಡೆಯುವ ದೈನಂದಿನ ಪ್ರಚಲಿತ ವಿದ್ಯಮಾ ನಗಳ ಕುರಿತು ವಿಸ್ತ್ರತ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯ ದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಕೆ.ರಾಘವೇಂದ್ರ ಕಿಣಿ, ರೇಷ್ಮಾ ಉದಯ ಶೆಟ್ಟಿ, ಮುಖಂಡರಾದ ಕಿರಣ್ ಕುಮಾರ್, ಮಹಾವೀರ ಹೆಗ್ಡೆ, ಸದಾನಂದ ಉಪ್ಪಿನಕುದ್ರು, ಮನೋಹರ್ ಕಲ್ಮಾಡಿ, ರಾಜೇಶ್ ಕಾವೇರಿ, ದಿನಕರ ಬಾಬು, ರತ್ನಾಕರ ಇಂದ್ರಾಳಿ, ಪ್ರಭಾಕರ ಪೂಜಾರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News