×
Ad

ಗಂಗೊಳ್ಳಿ: ವಿಶ್ವ ಮಹಿಳಾ ದಿನಾಚರಣೆ

Update: 2025-04-09 18:07 IST

ಗಂಗೊಳ್ಳಿ, ಎ.9: ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆ ಮತ್ತು ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ಜಂಟಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಮೇಲ್ಗಂಗೊಳ್ಳಿಯ ಡಾ.ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಜರಗಿತು.

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ ಟಿ.ಎಲ್. ಶುಭಾಶಂಸನೆಗೈದರು.

ಗಂಗೊಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರಾದ ಫಿಲೋಮಿನಾ ಫೆರ್ನಾಂಡಿಸ್, ಶೇಷಮ್ಮ, ಶೋಭಾ ಎಸ್., ಕಮಲಾ, ರೇಖಾ ಕೆ., ಸಂಗೀತಾ, ಸಹನಾ ಹಾಗೂ ನಿಖಿತಾ ಅವರನ್ನು ಸನ್ಮಾನಿಸಲಾಯಿತು.

ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಗೋಪಾಲ ಪೂಜಾರಿ, ಅಂಗನವಾಡಿ ಮೇಲ್ವಿಚಾರಕಿ ರೇಖಾ ಕೆ., ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಗುರುರಾಜ್ ಆಚಾರ್ಯ, ಸಹಶಿಕ್ಷಕ ಯೋಗೀಶ್, ಜಿ.ವಿ.ಆರ್.ಲಕ್ಷ್ಮಣ ಪೂಜಾರಿ, ಎಸ್‌ಡಿಎಂಸಿ ಅಧ್ಯಕ್ಷೆ ಸವಿತಾ ಖಾರ್ವಿ, ಅರ್ಚನಾ ಮಹಿಳಾ ಮಂಡಲ ಅಧ್ಯಕ್ಷೆ ಜ್ಯೋತಿ ಆನಂದ, ಸುಮಿತ್ರಾ ಈಶ್ವರ, ಈಶ್ವರ ಜಿ. ಮತ್ತಿತರರು ಉಪಸ್ಥಿತರಿದ್ದರು.

ಶ್ರೀಮತಿ ಸ್ವಾಗತಿಸಿದರು. ಫಿಲೋಮಿನಾ ಫೆರ್ನಾಂಡಿಸ್ ಕಾರ್ಯಕ್ರಮ ನಿರ್ವಹಿಸಿದರು. ಸುಮಿತ್ರಾ ಜಿ. ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News