ಕಾರ್ಕಳ: ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
ಕಾರ್ಕಳ: ಇಲ್ಲಿನ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲ ಪ್ರೊ.ಸುರೇಶ್ ರೈ ಕೆ. ಮಾತನಾಡಿ, ಭಾರತರತ್ನ ಡಾ. ಬಿ ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳು ವರ್ತಮಾನಕ್ಕೂ ಹಾಗೂ ಭವಿಷ್ಯಕ್ಕೂ ಪ್ರಸ್ತುತವಾಗಿದೆ. ಅವರು ಪ್ರತಿಪಾದಿಸಿದ ರಾಷ್ಟ್ರೀಯವಾದವು ರಾಜಕೀಯ ಸ್ವಾತಂತ್ರ್ಯಕ್ಕೆ ಬದಲಾಗಿ ಸಾಮಾಜಿಕ ಸ್ವಾತಂತ್ರ್ಯ ಹಾಗೂ ಸಹಬಾಳ್ವೆಯನ್ನು ಬಿಂಬಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಘನ ಭಾರತ ಸಂವಿಧಾನದ ಪೀಠಿಕೆಯನ್ನು ರಾಜ್ಯಶಾಸ್ತ್ರ ಸಹ ಪ್ರಾಧ್ಯಾಪಕ ಭಾಗ್ಯಲಕ್ಷ್ಮಿ ಟಿ.ಎಂ. ಪ್ರತಿಜ್ಞ ವಿಧಿಯಾಗಿ ಬೋಧಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಶಾಮ ಮಾತನಾಡಿದರು.
ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಪ್ರೊ.ಚಂದ್ರಾವತಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಸೌಮ್ಯಾ ಎಚ್.ಕೆ. ಉಪಸ್ಥಿತರಿದ್ದರು. ಕಾರ್ಯಕ್ರಮವು ಅಂಬೇಡ್ಕರ್ ಅವರ ಛಾಯಾಚಿತ್ರಕ್ಕೆ ಪುಷ್ಪವನ್ನು ಸಮರ್ಪಿಸುವುದರ ಮೂಲಕ ಪ್ರಾರಂಭವಾಯಿತು. ವಿದ್ಯಾರ್ಥಿನಿಯರಾದ ವಿಲಾಸಿನಿ ಕಾರ್ಯಕ್ರಮ ನಿರೂಪಿಸಿದರು. ಅಶ್ವಿತಾ ದ್ವಿತೀಯ ನಾಡಗೀತೆ ಹಾಡಿದರು.
ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.