×
Ad

ಅಂಬೇಡ್ಕರ್ ವಿಚಾರಧಾರೆ ಪಾಲನೆ ಇಂದಿನ ಅಗತ್ಯತೆ: ಕಿಶೋರ್‌ ಕುಮಾರ್

Update: 2025-04-16 18:52 IST

ಉಡುಪಿ, ಎ.16: ಗ್ರಾಮಪಂಚಾಯತ್‌ನಿಂದ ಸಂಸತ್‌ವರೆಗಿನ ಚುನಾವಣೆಗಳಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿಕೊಟ್ಟ ಧೀಮಂತ ನಾಯಕ ಡಾ.ಅಂಬೇಡ್ಕರ್. ಅವರ ಉದಾತ್ತ ವಿಚಾರಧಾರೆ ಹಾಗೂ ಜೀವನಾದರ್ಶಗಳ ಪಾಲನೆ ಇಂದಿನ ಅಗತ್ಯತೆಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್‌ಕುಮಾರ್ ಕುಂದಾಪುರ ಹೇಳಿದ್ದಾರೆ.

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಯುವ ಚಿಂತಕ ಸಂತೋಷ್ ನಂಬಿಯಾರ್ ಪಡುಬಿದ್ರಿ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅಸಾಮಾನ್ಯ ಸಾಧನೆ, ಅವರು ದೇಶಕ್ಕೆ ನೀಡಿದ ಕೊಡುಗೆ ಹಾಗೂ ಜೀವನಾದರ್ಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಎಸ್‌ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಎಸ್.ಸಿ. ಮೋರ್ಚಾ ಪ್ರಮುಖರಾದ ಹಿರಿಯಣ್ಣ, ಸದಾನಂದ ಕೈಪುಂಜಾಲು ಸಹಿತ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಂ. ಅಂಚನ್ ಸ್ವಾಗತಿಸಿದರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News