×
Ad

ಪಹಲ್ಗಾಮ್ ಭಯೋತ್ಪಾದಕ ದಾಳಿ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ

Update: 2025-04-23 19:35 IST

ಉಡುಪಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 27 ಮಂದಿ ಅಮಾಯಕ ಪ್ರವಾಸಿಗರು ಮೃತಪಟ್ಟಿದ್ದಾರೆ. ಈ ಘಟನೆಯು ಅಮಾನವೀಯವಾಗಿದ್ದು ಇದನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ತೀವ್ರವಾಗಿ ಖಂಡಿಸಿದೆ

ಧರ್ಮದ ಹೆಸರಲ್ಲಿ ಕೊಲ್ಲುವ, ಹಿಂಸೆಯನ್ನು ಪ್ರಚೋದಿಸುವ ಕೃತ್ಯ ಖಂಡನಾರ್ಹವಾಗಿದ್ದು ಕೇಂದ್ರ ಗೃಹ ಇಲಾಖೆ ಈ ಪ್ರಕರಣವನ್ನು ಗಂಭೀರ ವಾಗಿ ಪರಿಗಣಿಸಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒಕ್ಕೂಟದ ವಕ್ತಾರ ಇಕ್ಬಾಲ್ ಮನ್ನಾ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News