ವಿಟಿಯು ವಲಯ ಮಟ್ಟದ ವಾಲಿಬಾಲ್: ಸಹ್ಯಾದ್ರಿ ತಂಡಕ್ಕೆ ಪ್ರಶಸ್ತಿ
ಉಡುಪಿ, ಎ.23: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಎರಡು ದಿನಗಳ ಕಾಲ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಇದರ 2025ನೇ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ಮಹಾ ವಿದ್ಯಾಲಯಗಳ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ತಂಡ ಪ್ರಶಸ್ತಿ ಗೆದ್ದು ಕೊಂಡಿದೆ.
ಪುತ್ತೂರಿವ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಹಾಗೂ ಬಂಟ ಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದಿ ದ್ದಾರೆ. ಇಂದು ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸ ಲಾಯಿತು.
ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ವಹಿಸಿದ್ದರು. ಉಪ ಪ್ರಾಂಶುಪಾಲ ಡಾ.ಗಣೇಶ್ ಐತಾಳ್, ಡೀನ್‌ಗಳು, ವಿವಿಧ ವಿಭಾಗದ ಮುಖ್ಯಸ್ಥರು, ದೈಹಿಕ ಶಿಕ್ಷಣ ನಿರ್ದೇಶಕರು ಮತ್ತು ವಿವಿಧ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಭಾಗವಹಿಸಿದ್ದರು.