ಜಮ್ಮು- ಕಾಶ್ಮೀರ ಪ್ರವಾಸಕ್ಕೆ ತೆರಳಿರುವ ಉಡುಪಿ ಜಿಲ್ಲೆಯ ಪ್ರವಾಸಿಗರ ಮಾಹಿತಿಗೆ ಸೂಚನೆ
ಉಡುಪಿ, ಎ.23: ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್‌ಗಾಮದಲ್ಲಿ ಉಗ್ರರ ದಾಳಿಗೆ ಕನ್ನಡಿಗರಿಬ್ಬರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ ಕರೆತರಲು ರಾಜ್ಯ ಸರಕಾರ ಪ್ರಯತ್ನಿಸುತ್ತಿದೆ.
ಕರ್ನಾಟಕದಲ್ಲಿ ಇಂಥ ಪ್ರವಾಸಗಳನ್ನು ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು(ಟೂರ್ ಆಪರೇಟರ್ಸ್ ಮತ್ತು ಟ್ರಾವೆಲ್ ಏಜೆಂಟ್ಸ್) ತಮ್ಮ ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಹಾಗೂ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ಸಹಾಯವಾಣಿ ಸಂಖ್ಯೆ: 080- 43344334, 080-43344335, 080-43344336 ಹಾಗೂ 080- 43344342ಗೆ ನೀಡುವಂತೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರ ಪ್ರಕಟನೆ ತಿಳಿಸಿದೆ.
ಉಡುಪಿ ಜಿಲ್ಲೆಯಿಂದ ಪ್ರವಾಸಿಗರು ಜಮ್ಮು- ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿ ಮೇಲ್ಕಂಡ ಘಟನೆಯಲ್ಲಿ ಸಿಲುಕಿಕೊಂಡಿದ್ದಲ್ಲಿ ಅಂತಹವರ ಮಾಹಿತಿಯನ್ನು ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ: 0820-2574802 ಅಥವಾ 1077ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಉಡುಪಿ ಜಿಲ್ಲಾಡಳಿತ ಕೋರಿದೆ.