ಮಣಿಪಾಲ: ಉಚಿತ ವೈದ್ಯಕೀಯ ತಪಾಸಣೆ
Update: 2025-04-23 21:23 IST
ಮಣಿಪಾಲ, ಎ.23: ಮಣಿಪಾಲದ ಮುನಿಯಾಲ್ ಆಯುರ್ವೇದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಯ ಚಿಕಿತ್ಸಾ ವಿಭಾಗದ ವತಿಯಿಂದ ಎ.30ರವರೆಗೆ ಒಂದು ವಾರ ಪ್ರತಿದಿನ ಬೆಳಗ್ಗೆ 9:00ರಿಂದ ಸಂಜೆ 5:00 ಗಂಟೆಯವರೆಗೆ ನಿದ್ರಾಹೀತನೆ ಸಮಸ್ಯೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ತಜ್ಞರಿಂದ ಉಚಿತ ಸಲಹೆ, ತಪಾಸಣೆ, ಮನಸ್ಸಿನ ಒತ್ತಡ ನಿರ್ವಹಣೆಗೆ ಮಾರ್ಗದರ್ಶನ ಹಾಗೂ ಆರೋಗ್ಯ ಪರೀಕ್ಷೆಗಳನ್ನು ನಡೆಸಿ ಉಚಿತ ಚಿಕಿತ್ಸಾ ಸಲಹೆಗಳನ್ನು ನೀಡಲಾಗುತ್ತದೆ. ನಿದ್ರಾಹೀನತೆಗೆ ಸಂಬಂಧಿಸಿದಂತೆ ವಿವಿಧ ಸಮಸ್ಯೆಗಳಿಂದ ಬಳಲುತ್ತಿರುವವರು ಈ ಅವಕಾಶದ ಸದುಪಯೋಗ ಪಡೆದು ಕೊಳ್ಳಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.