ವಿದ್ಯುತ್ ಕಂಬಕ್ಕೆ ಸ್ಕೂಟರ್ ಢಿಕ್ಕಿ: ಸಹಸವಾರ ಮೃತ್ಯು
Update: 2025-04-23 21:49 IST
ಮಣಿಪಾಲ: ಸ್ಕೂಟರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸಹಸವಾರ ಮೃತಪಟ್ಟ ಘಟನೆ 80 ಬಡಗುಬೆಟ್ಟು ಗ್ರಾಮದ ಅರ್ಬಿ ಕ್ರಾಸ್ ಬಳಿ ಎ.22ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಸಹಸವಾರ ಪರ್ಕಳ ನಿವಾಸಿ ಅಬೂಬಕ್ಕರ್ ಎಂದು ಗುರುತಿಸ ಲಾಗಿದೆ. ಸವಾರ ಇಸ್ಮಾಯಿಲ್ ಎಂಬವರು ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಣಿಪಾಲ ಕಡೆಯಿಂದ ಹಿರೇಬೆಟ್ಟು ಕಡೆಗೆ ಹೋಗುತ್ತಿದ್ದ ಸ್ಕೂಟರ್, ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಇಬ್ಬರು ಸವಾರರು ರಸ್ತೆಗೆ ಬಿದ್ದು ಗಾಯ ಗೊಂಡರು. ಇವರ ಪೈಕಿ ಗಂಭೀರವಾಗಿ ಗಾಯಗೊಂಡ ಅಬೂಬಕ್ಕರ್ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.