×
Ad

ರಾಜ್ಯಸಭಾಪತಿ ಬಸ್ರೂರು ರಾಜೀವ ಶೆಟ್ಟಿಗೆ ಸಾರ್ವಜನಿಕ ಅಭಿನಂದನೆ

Update: 2025-04-25 20:56 IST

ಉಡುಪಿ, ಎ.25: ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಾದ ಭಾರತೀಯ ರೆಡ್‌ಕ್ರಾಸ್‌ನ ಅಂಗಸಂಸ್ಥೆ ಯಾದ ಕರ್ನಾಟಕ ರೆಡ್‌ಕ್ರಾಸ್‌ನ ಸಭಾಪತಿಗಳಾಗಿ ಮೂರನೇ ಬಾರಿ ಆಯ್ಕೆಯಾಗಿರುವ ಬಸ್ರೂರು ರಾಜೀವ ಶೆಟ್ಟಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದು ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದ್ದಾರೆ.

ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ, ನಗರದ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯ ರೆಡ್‌ಕ್ರಾಸ್ ಸಭಾಪತಿಗಳಾಗಿ ಆಯ್ಕೆಯಾದ ಬಸ್ರೂರು ರಾಜೀವ ಶೆಟ್ಟಿ ಅವರನ್ನು ಸಾರ್ವಜನಿಕವಾಗಿ ಸನ್ಮಾನಿಸಿ ಅವರು ಮಾತನಾಡುತಿದ್ದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ರಾಜೀವ ಶೆಟ್ಟಿ ಸೇವಾಕಾರ್ಯ ಗಳ ಮೂಲಕ ಉಡುಪಿ ರೆಡ್‌ಕ್ರಾಸ್‌ನ ಘನತೆಯನ್ನು ಹೆಚ್ಚಿಸಿದ್ದಾರೆ ಎಂದರು. ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ಶುಭ ಹಾರೈಸಿದರು. ಮಾಜಿ ಜಿಲ್ಲಾ ಗವರ್ನರ್ ವಿ.ಜಿ. ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು.

ಅಂಬಲಪಾಡಿ ಶ್ರೀಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ವಿಜಯ ಬಲ್ಲಾಳ್, ಉಡುಪಿ ಜಿಲ್ಲಾ ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ, ಕುಂದಾಪುರ ರೆಡ್‌ಕ್ರಾಸ್ ಸಭಾಪತಿ ಜಯಕರ ಶೆಟ್ಟಿ, ಮಂಗಳೂರು ವಿವಿ ರೆಡ್‌ಕ್ರಾಸ್ ಸಂಯೋಜಕಿ ಡಾ. ಗಾಯತ್ರಿ, ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಸಭಾಪತಿ ಶಾಂತರಾಮ್ ಶೆಟ್ಟಿ, ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷ ಲೂಯಿಸ್ ಲೋಬೋ, ರೆಡ್‌ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈಜಿ., ಮಾಜಿ ಖಜಾಂಚಿ ಟಿ. ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ರೆಡ್‌ಕ್ರಾಸ್ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿ ಸಿದರೆ, ಜಿಲ್ಲಾ ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಸೇರಿಗಾರ ಕಾರ್ಯಕ್ರಮ ನಿರ್ವಹಿಸಿದರು. ರೆಡ್‌ಕ್ರಾಸ್ ಖಜಾಂಚಿ ರಮಾದೇವಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News