×
Ad

ಅಕ್ಕ ಕೆಫೆಗೆ ನೇರ ಸಂದರ್ಶನ

Update: 2025-04-26 20:15 IST

ಉಡುಪಿ, ಎ.26: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಮೂಲಕ ಸಂಜೀವಿನಿ ಸ್ವ ಸಹಾಯ ಗುಂಪುಗಳ ಸದಸ್ಯೆಯರನ್ನು ಹೋಟೆಲ್ ಉದ್ದಿಮೆಯಲ್ಲಿ ತೊಡಗಿಸಿ, ಅವರ ಸ್ವಾವಲಂಬಿ ಜೀವನಕ್ಕೆ ನೆರವಾಗುವ ಉದ್ದೇಶದಿಂದ ‘ಅಕ್ಕಾ ಕೆಫೆ’ ಯೋಜನೆಯನ್ನು ಜಿಲ್ಲೆಯಲ್ಲಿ ಪ್ರಾರಂಭಿಸಲಾಗುತ್ತಿದೆ.

ಮೊದಲ ಹಂತವಾಗಿ ಅಕ್ಕಾ ಕೆಫೆಯನ್ನು ಮಣಿಪಾಲ ರಜತಾದ್ರಿಯ ಜಿಲ್ಲಾಡಳಿತ ಕಚೇರಿ ಸಂಕೀರ್ಣದಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದ್ದು, ಇದನ್ನು ನಿರ್ವಹಿಸಲು ಅರ್ಹ ಆಸಕ್ತ ಸಂಜೀವಿನಿ ಗುಂಪುಗಳಿಗೆ ಮೇ 3 ರಂದು ಜಿಲ್ಲಾ ಪಂಚಾಯತ್‌ನಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಗ್ರಾಮೀಣ/ನಗರ ಸಂಜೀವಿನಿ ಸ್ವಸಹಾಯ ಗುಂಪುಗಳಾಗಿರುವ, ಈಗಾಗಲೇ ಹೋಟೆಲ್ ಅಥವಾ ಕ್ಯಾಟರಿಂಗ್ ಉದ್ಯಮದಲ್ಲಿ ಅನುಭವ ಹೊಂದಿರುವ ಸ್ಥಳೀಯ ಸ್ವಸಹಾಯ ಗುಂಪುಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಸ್ವಸಹಾಯ ಗುಂಪುಗಳು ಅಗತ್ಯ ದಾಖಲೆ ಗಳೊಂದಿಗೆ ಮೇ 3ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಅವಿನಾಶ್ (ಮೊ.ನಂ.:9844234080) ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News